ಇದೇ ಜುಲೈ 4 ರಂದು Samsung Galaxy M47 5G ಫೋನ್‌ ಖರೀದಿಗೆ ಲಭ್ಯ! ಬೆಲೆ ನೋಡಿ

HIGHLIGHTS

ಇದೇ ಜುಲೈ 4 ರಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5G ಖರೀದಿಗೆ ಲಭ್ಯ

ಈ ಹೊಸ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 6 Gen 3 ಪ್ರೊಸೆಸರ್‌ ಹೊಂದಿದೆ

ಈ ನೂತನ ಮೊಬೈಲ್‌ ಮ್ಯಾಟ್-ಟೆಕ್ಸ್ಚರ್ಡ್ ಫಿನಿಶ್ ಮತ್ತು ಬ್ಲೇಜ್ ಬ್ಲೂ ಕಲರ್ ಆಯ್ಕೆ ಪಡೆದಿದೆ

ಇತ್ತೀಚಿಗೆ ಹೊಸದಾಗಿ ಬಿಡುಗಡೆ ಆಗಿರುವ Samsung Galaxy M47 5G ಸ್ಮಾರ್ಟ್‌ಫೋನ್ ಬಜೆಟ್‌ ದರದ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್‌ ಇದೇ ಜುಲೈ 4 ರಂದು ದೇಶೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಲಿದೆ. ಈ ನೂತನ ಮೊಬೈಲ್‌ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದೆ. ಅಲ್ಲದೇ ಈ ಮೊಬೈಲ್‌ ರೋಗ್ ರೆಡ್ ಬಣ್ಣದಲ್ಲಿ ಲಭ್ಯವಿದೆ. ಇದು ಮ್ಯಾಟ್-ಟೆಕ್ಸ್ಚರ್ಡ್ ಫಿನಿಶ್ ಮತ್ತು ಬ್ಲೇಜ್ ಬ್ಲೂ ಕಲರ್‌ ಆಯ್ಕೆಯನ್ನು ಹೊಂದಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5G ಫೋನಿನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Samsung Galaxy S26 Plus ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ! ಇದು ಸೀಮಿತ ಅವಧಿಯ ಆಫರ್‌

Samsung Galaxy M47 5G ಸೇಲ್ ಮಾಹಿತಿ

ಭಾರತದಲ್ಲಿ ಸ್ಯಾಮ್‌ಸಂಗ್‌ನ ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5G ಮೊಬೈಲ್‌ ಇದೇ ಜುಲೈ 4 ರಿಂದ ಅಮೆಜಾನ್ ಇ ಕಾಮರ್ಸ್‌ ಮೂಲಕ ಮಾರಾಟಕ್ಕೆ ಬರಲಿದೆ. ಈ ಫೋನಿನ ಆರಂಭಿಕ ಬೆಲೆ 22,999 ರೂ.ಗಳು ಆಗಿದೆ. ಆದಾಗ್ಯೂ, ಈ ಬೆಲೆಯು ಕೂಪನ್ ಕೊಡುಗೆ ಮತ್ತು ಬ್ಯಾಂಕ್ ರಿಯಾಯಿತಿಯನ್ನು ಒಳಗೊಂಡಿದೆ. ಅಂದಹಾಗೆ ಈ ಮೊಬೈಲ್‌ ರೋಗ್ ರೆಡ್ ಬಣ್ಣದಲ್ಲಿ ಲಭ್ಯವಿದೆ. ಇದು ಮ್ಯಾಟ್-ಟೆಕ್ಸ್ಚರ್ಡ್ ಫಿನಿಶ್ ಮತ್ತು ಬ್ಲೇಜ್ ಬ್ಲೂ ಕಲರ್‌ ಆಯ್ಕೆಯನ್ನು ಹೊಂದಿದೆ.

Samsung Galaxy M47 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5G ಮೊಬೈಲ್‌ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5G ಮೊಬೈಲ್‌ 6.7 ಇಂಚಿನ FHD+ ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 120Hz ರಿಫ್ರೆಶ್ ರೇಟ್‌ ಮತ್ತು 1,400 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಹೊಂದಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ನಿಂದ ರಕ್ಷಿಸಲಾಗಿದೆ. ಹಾಗೆಯೇ ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಸಪೋರ್ಟ್‌ ಸಹ ಪಡೆದುಕೊಂಡಿದೆ.

ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5G ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 5MP ಮತ್ತು 2MP ಸೆನ್ಸಾರ್‌ ಸಾಮರ್ಥ್ಯ ಒಳಗೊಂಡಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್‌ ಎಲ್ಲಾ ಕ್ಯಾಮೆರಾಗಳಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್ 6,000mAh ಬ್ಯಾಟರಿ ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :