Samsung Galaxy M56 5G ಮೊಬೈಲ್‌ಗೆ ಭರ್ಜರಿ ಆಫರ್‌! ಭಾರೀ ಬೆಲೆ ಇಳಿಕೆ

HIGHLIGHTS

ಅಮೆಜಾನ್‌ನಲ್ಲಿ ಗ್ಯಾಲಕ್ಸಿ M56 5G ಫೋನ್‌ಗೆ ಬಿಗ್ ಆಫರ್‌

ಸ್ಯಾಮ್‌ಸಂಗ್‌ನ ಈ ಫೋನ್‌ 5,000mAh ಬ್ಯಾಟರಿ ಪಡೆದುಕೊಂಡಿದೆ

ಗ್ಯಾಲಕ್ಸಿ M56 5G ಮೊಬೈಲ್‌ Exynos 1480 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ

ಸ್ಯಾಮ್‌ಸಂಗ್‌ ಕಂಪನಿಯ ಜನಪ್ರಿಯ ಫೋನ್‌ಗಳ ಪೈಕಿ ಒಂದಾಗಿರುವ Samsung Galaxy M56 5G ಸ್ಮಾರ್ಟ್‌ಫೋನ್‌ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಮೊಬೈಲ್‌ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸ್ಯಾಮ್‌ಸಂಗ್‌ ಸಂಸ್ಥೆಯ ಈ ಮೊಬೈಲ್‌ ಆಕ್ಟಾ ಕೋರ್ Exynos 1480 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಹೊಂದಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಕಡಿಮೆ ಬೆಲೆಯಲ್ಲಿ ಲಾಂಚ್‌ ಆಯ್ತು Redmi A7 Pro 5G ಸ್ಮಾರ್ಟ್‌ಫೋನ್‌! ಫೀಚರ್ಸ್‌ ಹೀಗಿವೆ

Samsung Galaxy M56 5G ಬೆಲೆಯಲ್ಲಿ ಭಾರೀ ಇಳಿಕೆ

ಸ್ಯಾಮ್‌ಸಂಗ್‌ ಕಂಪನಿಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಫೋನ್‌ ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 8 GB RAM + 128 GB ವೇರಿಯಂಟ್‌ ಬೆಲೆ 33,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 23,499 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್‌ ಲೈಟ್‌ ಗ್ರೀನ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಮೊಬೈಲ್‌ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಒಳಗೊಂಡ 6.73 ಇಂಚಿನ ಪೂರ್ಣ-HD+ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 1200 nits ಬ್ರೈಟ್ನೆಸ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ Exynos 1480 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB RAM + 128GB ಹಾಗೂ 8GB + 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ ಇದು Android 15 ಆಧಾರಿತ One UI 7 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಮೊಬೈಲ್‌ ಅತ್ಯುತ್ತಮ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಹೊಂದಿರುವ ಜೊತೆಗೆ 8MP ಸೆಕೆಂಡರಿ ಕ್ಯಾಮೆರಾ ಹಾಗೂ 2MP ತೃತೀಯ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 12MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 45W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :