Samsung Galaxy M56 5G ಖರೀದಿಸಲು ಇದು ಬೆಸ್ಟ್‌ ಟೈಮ್‌! ಈ ಆಫರ್‌ಗೆ ನೀವು ಫಿದಾ ಆಗ್ತೀರಾ

HIGHLIGHTS

ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಫೋನಿಗೆ ಬೊಂಬಾಟ್‌ ಆಫರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಫೋನ್‌ 50MP ಪ್ರಾಥಮಿಕ ಕ್ಯಾಮೆರಾ ಪಡೆದುಕೊಂಡಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಮೊಬೈಲ್‌ 45W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ

ಭರ್ಜರಿ ಡಿಸ್ಕೌಂಟ್‌ ಆಫರ್‌ನಲ್ಲಿ ಸ್ಯಾಮ್‌ಸಂಗ್‌ನ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿದೆ ಒಳ್ಳೆಯ ಅವಕಾಶ. ಹೌದು, ಜನಪ್ರಿಯ ಇ ಕಾಮರ್ಸ್‌ ವೆಬ್‌ಸೈಟ್‌ ಅಮೆಜಾನ್‌ನಲ್ಲಿ ಇದೀಗ ಸ್ಯಾಮ್‌ಸಂಗ್‌ನ Samsung Galaxy M56 5G ಸ್ಮಾರ್ಟ್‌ಫೋನ್‌ ಭಾರೀ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದಲ್ಲದೇ ಗ್ರಾಹಕರು ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಫೋನ್‌ octa core Exynos 1480 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ ಹಾಗೂ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದುಕೊಂಡಿದೆ. ಇದರೊಂದಿಗೆ AMOLED ಡಿಸ್‌ಪ್ಲೇ ಅನ್ನು ಸಹ ಒಳಗೊಂಡಿದೆ. ಹಾಗಾದರೆ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Also Read : ಅಗ್ಗದ Vivo T4 Lite 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಮತ್ತಷ್ಟು ಡಿಸ್ಕೌಂಟ್‌!

Samsung Galaxy M56 5G ಬೆಲೆಯಲ್ಲಿ ಭಾರೀ ಇಳಿಕೆ

ಸ್ಯಾಮ್‌ಸಂಗ್‌ ಕಂಪನಿಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಮೊಬೈಲ್‌ ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಸಖತ್ ರಿಯಾಯಿತಿ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 8GB RAM + 128GB ವೇರಿಯಂಟ್‌ ಬೆಲೆ 33,999 ರೂಗಳು ಪ್ರೈಸ್‌ಟ್ಯಾಗ್‌ ಹೊಂದಿದೆ. ಆದರೆ ಪ್ರಸ್ತುತ ಈ ಮೊಬೈಲ್‌ ಅನ್ನು ಗ್ರಾಹಕರು 21,999 ರೂಗಳ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ಲೈಟ್‌ ಗ್ರೀನ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಸ್ಮಾರ್ಟ್‌ಫೋನ್‌ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಮೊಬೈಲ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಒಳಗೊಂಡ 6.73 ಇಂಚಿನ ಪೂರ್ಣ-HD+ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 1200 nits ಬ್ರೈಟ್ನೆಸ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಆಕ್ಟಾ ಕೋರ್ Exynos 1480 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB RAM + 128GB ಹಾಗೂ 8GB + 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ ಇದು Android 15 ಆಧಾರಿತ One UI 7 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ M56 5G ಮೊಬೈಲ್‌ ಅತ್ಯುತ್ತಮ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಹೊಂದಿರುವ ಜೊತೆಗೆ 8MP ಸೆಕೆಂಡರಿ ಕ್ಯಾಮೆರಾ ಹಾಗೂ 2MP ತೃತೀಯ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 12MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 45W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :