ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯ ಮೀಡ್‌ರೇಂಜ್ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿರುವ Samsung Galaxy M56 5G ಮೊಬೈಲ್ ಕ್ಯಾಮೆರಾ, ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ Exynos 1480 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಈ ಫೋನ್ ಲೈಟ್ ಗ್ರೀನ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ನಲ್ಲಿ ಇ ಕಾಮರ್ಸ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ದೈತ್ಯ Vivo X200T ಸ್ಮಾರ್ಟ್‌ಫೋನ್ ಈಗ ಭಾರೀ ಬೆಲೆ ಇಳಿಕೆಯಲ್ಲಿ ಖರೀದಿಗೆ ಲಭ್ಯ!
ಬೊಂಬಾಟ್ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್ ಅಮೆಜಾನ್‌ನಲ್ಲಿ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 33,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 23,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಮೊಬೈಲ್ ಲೈಟ್ ಗ್ರೀನ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಒಳಗೊಂಡ 6.73 ಇಂಚಿನ ಪೂರ್ಣ-HD+ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 1200 nits ಬ್ರೈಟ್ನೆಸ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಆಕ್ಟಾ ಕೋರ್ Exynos 1480 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB RAM + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ ಇದು Android 15 ಆಧಾರಿತ One UI 7 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್ ಅತ್ಯುತ್ತಮ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹೊಂದಿರುವ ಜೊತೆಗೆ 8MP ಸೆಕೆಂಡರಿ ಕ್ಯಾಮೆರಾ ಹಾಗೂ 2MP ತೃತೀಯ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 12MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.