ಅಮೆಜಾನ್ ತಾಣದ ಬಹುನಿರೀಕ್ಷಿತ ಗ್ರೇಟ್ ಸಮ್ಮರ್ ಸೇಲ್ ಪ್ರಾರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಮಾರಾಟದಲ್ಲಿ ಎಲ್ಲ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಲಾಗಿದೆ. ಪ್ರಮುಖವಾಗಿ ಸ್ಯಾಮ್‌ಸಂಗ್ ಕಂಪನಿಯ Samsung Galaxy M56 5G ಮೊಬೈಲ್ ಸಹ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಆಕ್ಟಾ ಕೋರ್ Exynos 1480 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್‌ನ ಆಫರ್ ಬೆಲೆ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : JioHotstar ಚಂದಾದಾರಿಕೆ ಲಭ್ಯವಿರುವ ಅಗ್ಗದ ಬೆಲೆಯ Vi ಡೇಟಾ ಪ್ಲಾನ್‌ಗಳ ಮಾಹಿತಿ
ಅಮೆಜಾನ್ ತಾಣದ ಗ್ರೇಟ್ ಸಮ್ಮರ್ ಸೇಲ್ ಇದೇ ಮೇ 8 ರಂದು ಪ್ರಾರಂಭ ಆಗಲಿದೆ. ಆದರೆ ಅಮೆಜಾನ್ ಪ್ರೈಮ್ ಸದಸ್ಯರಿಗೆ ಮೇ 7 ರಂದು ಮಾರಾಟ ತೆರೆಯುತ್ತದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 33,999 ರೂ.ಗಳು ಆಗಿದ್ದು, ಆದರೆ ಈ ಸೇಲ್‌ನಲ್ಲಿ 23,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಮೊಬೈಲ್ ಲೈಟ್ ಗ್ರೀನ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಫೋನ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಒಳಗೊಂಡ 6.73 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಇದರ ಸ್ಕ್ರೀನ್ 1200 nits ಬ್ರೈಟ್ನೆಸ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಆಕ್ಟಾ ಕೋರ್ Exynos 1480 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB RAM + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ ಇದು ಆಂಡ್ರಾಯ್ಡ್ 15 ಆಧಾರಿತ One UI 7 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M56 5G ಮೊಬೈಲ್ ಅತ್ಯುತ್ತಮ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹೊಂದಿರುವ ಜೊತೆಗೆ 8MP ಸೆಕೆಂಡರಿ ಕ್ಯಾಮೆರಾ ಹಾಗೂ 2MP ತೃತೀಯ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 12MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.