Samsung ಕಂಪನಿಯ Glaxay S ಸರಣಿಯ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್ ಅನ್ನು ಈಗ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸುವ ಅವಕಾಶ ಲಭ್ಯ ಆಗಿದೆ. ಹೌದು, Samsung Galaxy S24 5G ಸ್ಮಾರ್ಟ್‌ಫೋನ್ ಇದೀಗ Flipkart ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ 30000 ರೂಗಳ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ಸಹ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ ಕ್ವಾಲ್ಕಮ್ Snapdragon 8 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಹಾಗೆಯೇ 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. Flipkart ವೆಬ್‌ಸೈಟ್‌ನಲ್ಲಿ Samsung Galaxy S24 5G ಫೋನಿಗೆ ಲಭ್ಯವಿರುವ ಕೊಡುಗೆಯ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಇಂದು Motorola Signature ಮೊಬೈಲ್ ಮಾರಾಟ ಪ್ರಾರಂಭ! ಬೆಲೆ ಮತ್ತು ಆಫರ್ ಬಗ್ಗೆ ತಿಳಿಯಿರಿ
ಪ್ರಮುಖ ಲೀಡಿಂಗ್ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒಂದಾಗಿರುವ Samsung ಕಂಪನಿಯ Samsung Galaxy S24 5G ಫೋನ್ ಪ್ರಸ್ತುತ ಭಾರೀ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಸದ್ಯ Flipkart ನ ಅಧಿಕೃತ ವೆಬ್‌ಸೈಟ್‌ನಲ್ಲಿ Samsung Galaxy S24 5G ಫ್ಲ್ಯಾಗ್‌ಶಿಪ್ ಮೊಬೈಲ್ 74,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ 30000 ರೂಗಳ ರಿಯಾಯಿತಿ ತಿಳಿಸಿದೆ. ಹೀಗಾಗಿ ಫೋನ್ 44,999 ರೂಗಳ ಬೆಲೆಗೆ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ EMI ವಹಿವಾಟುಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ.
ಒನ್‌ಪ್ಲಸ್ ಕಂಪನಿಯ Samsung Galaxy S24 5G ಸ್ಮಾರ್ಟ್‌ಫೋನ್ 6.2 ಇಂಚಿನ Dynamic AMOLED 2X ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದು 2340 x 1080 ಪಿಕ್ಸಲ್ ರೆಸಲ್ಯೂಶನ್ ಪಡೆದುಕೊಂಡಿದೆ. ಹಾಗೆಯೇ ಇದರ ಸ್ಕ್ರೀನ್ 2600 nits ಗರಿಷ್ಠ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಪ್ರಮುಖವಾಗಿ ಈ ಫೋನ್ ಕ್ವಾಲ್ಕಮ್ Snapdragon 8 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಈ ಮೊಬೈಲ್ 128GB, 256GB ಅಥವಾ 512GB ಸ್ಟೋರೇಜ್ ಸೌಲಭ್ಯವನ್ನು ಪಡೆದುಕೊಂಡಿದೆ.
Samsung Galaxy S24 5G ಮೊಬೈಲ್ ಫೋಟೋಗ್ರಫಿಗಾಗಿ ಅತ್ಯುತ್ತನ ಕ್ಯಾಮೆರಾ ಆಯ್ಕೆಗಳನ್ನು ಒಳಗೊಂಡಿದೆ. ಈ ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾವು 12MP ಅಲ್ಟ್ರಾ ವೈಡ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ತೃತೀಯ ಕ್ಯಾಮೆರಾವು 1 0MP ಟೆಲಿ ಫೋಟೋ ಸೆನ್ಸರ್ ಸೌಲಭ್ಯ ಪಡೆದಿದೆ. ಇನ್ನು ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಉಳಿದಂತೆ ಇದು 25W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಒಳಗೊಂಡಿದೆ. ಇದಕ್ಕೆ ಪೂರಕವಾಗಿ 4000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಸಹ ಪಡೆದುಕೊಂಡಿದೆ.