ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S24 5G ಮೊಬೈಲ್ ಖರೀದಿಸಲು ಇದೇ ಬೆಸ್ಟ್ ಚಾನ್ಸ್!
ಸ್ಯಾಮ್‌ಸಂಗ್‌ನ ಈ ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ
ಗ್ಯಾಲಕ್ಸಿ S24 ಫೋನ್ Snapdragon 8 Gen 3 ಪ್ರೊಸೆಸರ್ ಪಡೆದುಕೊಂಡಿದೆ
ಈ ಫ್ಲ್ಯಾಗ್‌ಶಿಪ್ ಮೊಬೈಲ್ 12MP ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸೌಲಭ್ಯ ಒಳಗೊಂಡಿದೆ
ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ಇದೀಗ ಗ್ಯಾಲಕ್ಸಿ S26 ಸರಣಿ ಬಿಡುಗಡೆ ಮಾಡುವ ತಯಾರಿಯಲ್ಲಿದೆ. ಆದರೆ ಈಗಾಗಲೇ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿರುವ Samsung Galaxy S24 5G ಮೊಬೈಲ್ ಭಾರೀ ಬೆಲೆ ಇಳಿಕೆ ಪಡೆದಿದೆ. ಹೌದು, ಪ್ರೇಮಿಗಳ ದಿನದ ಪ್ರಯುಕ್ತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು Samsung Galaxy S24 ಮೊಬೈಲ್‌ಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ಹೀಗಾಗಿ ಆಫರ್‌ನಲ್ಲಿ ಒಂದೊಳ್ಳೆ ಫ್ಲ್ಯಾಗ್‌ಶಿಪ್ ಖರೀದಿಸಬೇಕು ಎಂದು ಬಯಸುವವರಿಗೆ ಇದು ಬೆಸ್ಟ್ ಟೈಮ್. ಅಂದಹಾಗೆ ಈ ಮೊಬೈಲ್ ಕ್ವಾಲ್ಕಮ್‌ನ Snapdragon 8 Gen 3 ಪ್ರೊಸೆಸರ್ ಪವರ್ ಪಡೆದಿದ್ದು, ಹಾಗೆಯೇ ಅತ್ಯುತ್ತಮ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನುಳಿದಂತೆ Flipkart ವೆಬ್‌ಸೈಟ್‌ನಲ್ಲಿ Samsung Galaxy S24 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಭಾರತದಲ್ಲಿ Infinix Note Edge 5G ಬಿಡುಗಡೆಗೆ ದಿನಾಂಕ ಫಿಕ್ಸ್! ನಿರೀಕ್ಷಿತ ಬೆಲೆ ಹಾಗೂ ಫೀಚರ್ಸ್ ತಿಳಿಯಿರಿ
Samsung Galaxy S24 5G ಮೊಬೈಲ್‌ಗೆ ಭರ್ಜರಿ ರಿಯಾಯಿತಿ
Samsung Galaxy S24 5G ಮೊಬೈಲ್ ಸದ್ಯ Flipkart ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB RAM + 128 GB ವೇರಿಯಂಟ್ 74,999 ರೂಗಳ ಬೆಲೆಯನ್ನು ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 42,999 ರೂಗಳ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಈ ಮೊಬೈಲ್ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಇನ್ನು ಈ ಮೊಬೈಲ್ ಓನಿಕ್ಸ್ ಬ್ಲಾಕ್, ಮಾರ್ಬಲ್ ಗ್ರೇ, ಕೋಬಾಲ್ಟ್ ವೈಲೆಟ್ ಮತ್ತು ಆಂಬರ್ ಯೆಲ್ಲೋ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Samsung Galaxy S24 5G ಮೊಬೈಲ್‌ನ ಪ್ರಮುಖ ಫೀಚರ್ಸ್
Samsung Galaxy S24 5G ಮೊಬೈಲ್ 6.2 ಇಂಚಿನ ಡೈನಾಮಿಕ್ AMOLED ಡಿಸ್‌ಪ್ಲೇ ಅನ್ನು ಒಳಗೊಂಡಿರುವ ಜೊತೆಗೆ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಸೂರ್ಯನ ಬೆಳಕಿನಲ್ಲಿ 2,600 nits ವರೆಗೆ ಗರಿಷ್ಠ ಬ್ರೈಟ್ನೆಸ್ ಒದಗಿಸುವ ಸೌಲಭ್ಯ ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್ Snapdragon 8 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್ 8GB RAM + 256GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ.
ಅದೇ ರೀತಿ Samsung Galaxy S24 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು OIS ಮತ್ತು 8K ವಿಡಿಯೋ ಬೆಂಬಲಿತ 50MP ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನುಳಿದ ಎರಡು ಕ್ಯಾಮೆರಾಗಳು 12MP ಅಲ್ಟ್ರಾ ವೈಡ್ ಮತ್ತು 10MP ಟೆಲಿಫೋಟೋ ಸೆನ್ಸಾರ್ ಹೊಂದಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್ 12MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 4,000mAh ಬ್ಯಾಟರಿ ಜೊತೆಗೆ 25W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile