12GB RAM ಇರುವ Samsung Galaxy S25 5G ಬೆಲೆಯಲ್ಲಿ ಬೊಂಬಾಟ್‌ ಇಳಿಕೆ; ಈ ಆಫರ್‌ ಬಿಡಬೇಡಿ

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 ಫೋನಿಗೆ ಭಾರೀ ಡಿಸ್ಕೌಂಟ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 ಮೊಬೈಲ್‌ 4,000mAh ಬ್ಯಾಟರಿ ಸಪೋರ್ಟ್‌ ಪಡೆದಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಫೋನ್‌ ಸ್ನ್ಯಾಪ್‌ಡ್ರಾಗನ್‌ 8 ಇಲೈಟ್ ಪ್ರೊಸೆಸರ್‌ ಹೊಂದಿದೆ

12GB RAM ಇರುವ Samsung Galaxy S25 5G ಬೆಲೆಯಲ್ಲಿ ಬೊಂಬಾಟ್‌ ಇಳಿಕೆ; ಈ ಆಫರ್‌ ಬಿಡಬೇಡಿ

ಸ್ಯಾಮ್‌ಸಂಗ್‌ ಕಂಪನಿಯ Samsung Galaxy S25 5G ಮೊಬೈಲ್‌ ಆಕರ್ಷಕ ಫಿಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಸ್ನ್ಯಾಪ್‌ಡ್ರಾಗನ್‌ 8 ಇಲೈಟ್ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ಗೆ ಲಭ್ಯವಿರುವ ಆಫರ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 50MP ಟ್ರಿಪಲ್‌ ಕ್ಯಾಮೆರಾ ಇರುವ ದೈತ್ಯ Xiaomi 17 ಸ್ಮಾರ್ಟ್‌ಫೋನ್‌ ಖರೀದಿಗೆ ಇದುವೇ ಬೆಸ್ಟ್‌ ಆಫರ್‌!

Samsung Galaxy S25 5G ಮೊಬೈಲ್‌ಗೆ ಸಖತ್ ಆಫರ್‌

ಸ್ಟೈಲಿಶ್‌ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 12GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 1,04,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ 62,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಕಾಣಿಸಿಕೊಂಡಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

Samsung Galaxy S25 price drop

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಫೋನಿನ ಫೀಚರ್ಸ್‌ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಪಡೆದಿರುವು ಜೊತೆಗೆ 2600 ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಪಡೆದುಕೊಂಡಿದೆ. ಇನ್ನು ಈ ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಇಲೈಟ್ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಜೊತೆಗೆ 12GB RAM + 256GB ಸ್ಟೋರೇಜ್‌ ಆಯ್ಕೆಯನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು 12MP + 10MP ಸೆನ್ಸಾರ್‌ನ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್‌ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್‌ 4,000mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 45W ವೈರ್ಡ್ ಚಾರ್ಜಿಂಗ್ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile