ಸ್ಯಾಮ್‌ಸಂಗ್ ಕಂಪನಿಯ Samsung Galaxy S25 5G ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಸ್ನ್ಯಾಪ್‌ಡ್ರಾಗನ್ 8 ಇಲೈಟ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಮೊಬೈಲ್‌ಗೆ ಲಭ್ಯವಿರುವ ಆಫರ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 50MP ಟ್ರಿಪಲ್ ಕ್ಯಾಮೆರಾ ಇರುವ ದೈತ್ಯ Xiaomi 17 ಸ್ಮಾರ್ಟ್‌ಫೋನ್ ಖರೀದಿಗೆ ಇದುವೇ ಬೆಸ್ಟ್ ಆಫರ್!
ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 1,04,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ 62,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಕಾಣಿಸಿಕೊಂಡಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಮೊಬೈಲ್ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿರುವು ಜೊತೆಗೆ 2600 ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಇಲೈಟ್ ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಜೊತೆಗೆ 12GB RAM + 256GB ಸ್ಟೋರೇಜ್ ಆಯ್ಕೆಯನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು 12MP + 10MP ಸೆನ್ಸಾರ್‌ನ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್ 4,000mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 45W ವೈರ್ಡ್ ಚಾರ್ಜಿಂಗ್ ಹೊಂದಿದೆ.