ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S25 5G ಬೆಲೆಯಲ್ಲಿ ಈಗ ಭಾರೀ ಡಿಸ್ಕೌಂಟ್‌!

HIGHLIGHTS

ಸ್ಯಾಮ್‌ಸಂಗ್‌ನ ಈ ಮೊಬೈಲ್‌ ಇದೀಗ ಆಕರ್ಷಕ ಆಫರ್‌ನಲ್ಲಿ ಲಭ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆ ಹೊಂದಿದೆ

ಸ್ಯಾಮ್‌ಸಂಗ್‌ನ ಈ ಮೊಬೈಲ್‌ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್‌ ಆಯ್ಕೆ ಪಡೆದುಕೊಂಡಿದೆ

ಸ್ಯಾಮ್‌ಸಂಗ್‌ ಕಂಪನಿಯ ಸ್ಮಾರ್ಟ್‌ಫೋನ್‌ ಅನ್ನು ಆಫರ್‌ನಲ್ಲಿ ಖರೀದಿ ಮಾಡುವ ಯೋಚನೆ ಇದ್ದರೆ, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದ ಕಡೆಗೆ ಕಣ್ಣಾಯಿಸಿ. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ Samsung Galaxy S25 5G ಸ್ಮಾರ್ಟ್‌ಫೋನ್‌ ಆಕರ್ಷಕ ಬೆಲೆ ಇಳಿಕೆ ಪಡೆದುಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಫೋನ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ Qualcomm Snapdragon 8 Elite ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 4,000mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಇನ್ನು ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಬಹುನಿರೀಕ್ಷಿತ Xiaomi 17T ಸ್ಮಾರ್ಟ್‌ಫೋನ್‌ ಬಿಡುಗಡೆಗೆ ದಿನಾಂಕ ಫಿಕ್ಸ್! ಜಬರ್ದಸ್ತ್‌ ಕ್ಯಾಮೆರಾ

Samsung Galaxy S25 5G ಬೆಲೆಯಲ್ಲಿ ಇಳಿಕೆ

ಪ್ರಿಮಿಯಂ ಲುಕ್‌ ಜೊತೆಗೆ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಡಿಸ್ಕೌಂಟ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 99,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 79,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್‌ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಫೋನಿನ ಫೀಚರ್ಸ್‌ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಪಡೆದಿರುವು ಜೊತೆಗೆ 2600 ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಪಡೆದುಕೊಂಡಿದೆ. ಇನ್ನು ಈ ಫೋನ್‌ Qualcomm Snapdragon 8 Elite ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಜೊತೆಗೆ 12GB RAM + 256GB ಸ್ಟೋರೇಜ್‌ ಆಯ್ಕೆಯನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು 12MP + 10MP ಸೆನ್ಸಾರ್‌ನ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್‌ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್‌ 4,000mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 45W ವೈರ್ಡ್ ಚಾರ್ಜಿಂಗ್ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :