ಸ್ಟೈಲಿಶ್ ಲುಕ್ ಜೊತೆಗೆ ವೇಗದ ಪ್ರೊಸೆಸರ್ ಇರುವ Samsung Galaxy S25 ಬೆಲೆಯಲ್ಲಿ ಇಳಿಕೆ!
ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಬೆಲೆಯಲ್ಲಿ ಭರ್ಜರಿ ಆಫರ್
ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ 6,500mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ
ಸ್ಯಾಮ್‌ಸಂಗ್‌ನ ಈ ಫೋನ್ ಸ್ನ್ಯಾಪ್‌ಡ್ರಾಗನ್ 8 ಇಲೈಟ್ ಚಿಪ್‌ಸೆಟ್ ಪ್ರೊಸೆಸರ್ ಹೊಂದಿದೆ
ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ Amazon Great Freedom Sale 2026 ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಸಖತ್ ರಿಯಾಯಿತಿ ಪಡೆದಿವೆ. ಅವುಗಳ ಪೈಕಿ ಪ್ರೀಮಿಯಂ ವಿಭಾಗದ Samsung Galaxy S25 5G ಮೊಬೈಲ್ ಬೊಂಬಾಟ್ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಇದಷ್ಟೇ ಅಲ್ಲದೆ ಕೆಲವು ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ಇನ್‌ಸ್ಟಂಟ್ ರಿಯಾಯಿತಿ, ಎಕ್ಸ್‌ಚೇಂಜ್ ಕೊಡುಗೆ, ನೋ-ಕಾಸ್ಟ್ EMI ಹಾಗೂ ಕ್ಯಾಶ್‌ಬ್ಯಾಕ್ ಸೌಲಭ್ಯಗಳನ್ನೂ ಗ್ರಾಹಕರು ಪಡೆಯಬಹುದು. ಅಂದಹಾಗೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದುಕೊಂಡಿರುವ ಜೊತೆಗೆ 6,500mAh ಬ್ಯಾಟರಿ ಸೌಲಭ್ಯ ಹೊಂದಿದೆ. ಹಾಗಾದರೆ ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್‌ಗೆ ಲಭ್ಯ ಇರುವ ಆಫರ್ ಹಾಗೂ ಫೋನಿನ ಫೀಚರ್ಸ್ ಮುಂದೆ ತಿಳಿಯೋಣ.
SurveyAlso Read : ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Vivo V70 ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ!
Samsung Galaxy S25 5G ಫೋನಿಗೆ ಭರ್ಜರಿ ಆಫರ್
ಪ್ರೀಮಿಯಂ ವಿಭಾಗದಲ್ಲಿ ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸೇಲ್‌ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 80,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 59,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್ ಆಯ್ಕೆಗಳಲ್ಲಿ ಲಭ್ಯ. ಈ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಫೋನಿನ ಫೀಚರ್ಸ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಮೊಬೈಲ್ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿರುವು ಜೊತೆಗೆ 2600 ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಇಲೈಟ್ ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಜೊತೆಗೆ 12GB RAM + 256GB ಸ್ಟೋರೇಜ್ ಆಯ್ಕೆಯನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು 12MP + 10MP ಸೆನ್ಸಾರ್‌ನ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್ 4,000mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 45W ವೈರ್ಡ್ ಚಾರ್ಜಿಂಗ್ ಹೊಂದಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
