ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S25 5G ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

HIGHLIGHTS

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಈಗ ಬಿಗ್ ಆಫರ್‌ನಲ್ಲಿ ಲಭ್ಯ

ಈ ಮೊಬೈಲ್‌ 4,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ಈ ಫೋನ್‌ ಸ್ನ್ಯಾಪ್‌ಡ್ರಾಗನ್‌ 8 ಇಲೈಟ್ ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ

ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S25 5G ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಸ್ಯಾಮ್‌ಸಂಗ್‌ ಕಂಪನಿಯ Samsung Galaxy S25 5G ಮೊಬೈಲ್‌ ಅತ್ಯುತ್ತಮ ಕ್ಯಾಮೆರಾ ಹಾಗೂ ವೇಗದ ಪ್ರೊಸೆಸರ್‌ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಇಲೈಟ್ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 45W ವೈರ್ಡ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ನೇವಿ ಮತ್ತು ಸಿಲ್ವರ್ ಶ್ಯಾಡೋ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಬಜೆಟ್‌ ಬೆಲೆಯ POCO C85 5G ಫೋನ್‌ ಈಗ ಇನ್ನಷ್ಟು ರಿಯಾಯಿತಿಯಲ್ಲಿ ಲಭ್ಯ

Samsung Galaxy S25 5G ಮೊಬೈಲ್‌ಗೆ ಬಿಗ್‌ ಆಫರ್‌

ಪ್ರೀಮಿಯಂ ಫೀಚರ್ಸ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಸ್ಮಾರ್ಟ್‌ಫೋನ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 12GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 74,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 69,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

Samsung Galaxy S25 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಫೋನಿನ ಫೀಚರ್ಸ್‌ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಪಡೆದಿರುವು ಜೊತೆಗೆ 2600 ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಪಡೆದುಕೊಂಡಿದೆ. ಇನ್ನು ಈ ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಇಲೈಟ್ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಜೊತೆಗೆ 12GB RAM + 256GB ಸ್ಟೋರೇಜ್‌ ಆಯ್ಕೆಯನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು 12MP + 10MP ಸೆನ್ಸಾರ್‌ನ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್‌ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್‌ 4,000mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 45W ವೈರ್ಡ್ ಚಾರ್ಜಿಂಗ್ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile