ಸ್ಯಾಮ್‌ಸಂಗ್ ಕಂಪನಿಯ Samsung Galaxy S25 5G ಮೊಬೈಲ್ ಅತ್ಯುತ್ತಮ ಕ್ಯಾಮೆರಾ ಹಾಗೂ ವೇಗದ ಪ್ರೊಸೆಸರ್ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಇಲೈಟ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 45W ವೈರ್ಡ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ನೇವಿ ಮತ್ತು ಸಿಲ್ವರ್ ಶ್ಯಾಡೋ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಬಜೆಟ್ ಬೆಲೆಯ POCO C85 5G ಫೋನ್ ಈಗ ಇನ್ನಷ್ಟು ರಿಯಾಯಿತಿಯಲ್ಲಿ ಲಭ್ಯ
ಪ್ರೀಮಿಯಂ ಫೀಚರ್ಸ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಸ್ಮಾರ್ಟ್‌ಫೋನ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 74,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 69,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಮೊಬೈಲ್ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿರುವು ಜೊತೆಗೆ 2600 ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಇಲೈಟ್ ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಜೊತೆಗೆ 12GB RAM + 256GB ಸ್ಟೋರೇಜ್ ಆಯ್ಕೆಯನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು 12MP + 10MP ಸೆನ್ಸಾರ್‌ನ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್ 4,000mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 45W ವೈರ್ಡ್ ಚಾರ್ಜಿಂಗ್ ಹೊಂದಿದೆ.