Samsung Galaxy S25 5G Phone gets biggest Price cut on Flipkart Big Billion Days Sale 2026
ದಸರಾ ಹಬ್ಬದ ಪ್ರಯುಕ್ತ Flipkart ಆಯೋಜಿಸಿರುವ ಸ್ಪೆಷಲ್ ಸೇಲ್ನಲ್ಲಿ ಆಯ್ದ ಫೋನ್ಗಳಿಗೆ ಬೊಂಬಾಟ್ ರಿಯಾಯಿತಿ ಲಭ್ಯವಿದೆ. ಆ ಪೈಕಿ ಸ್ಯಾಮ್ಸಂಗ್ ಕಂಪನಿಯ Samsung Galaxy S25 5G ಮೊಬೈಲ್ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 8 ಇಲೈಟ್ ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 4,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ S25 5G ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 256GB ಸ್ಟೋರೇಜ್ ಇರುವ Google Pixel 10a ಮೊಬೈಲ್ ಬೆಲೆಯಲ್ಲಿ ಗಮನಾರ್ಹ ಇಳಿಕೆ!
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ S25 5G ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 12GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 1,04,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 58,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು, ಐಸ್ಬ್ಲೂ, ಮಿಂಟ್, ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಸ್ಯಾಮ್ಸಂಗ್ ಗ್ಯಾಲಕ್ಸಿ S25 5G ಮೊಬೈಲ್ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದರ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿರುವು ಜೊತೆಗೆ 2600 ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 8 ಇಲೈಟ್ ಚಿಪ್ಸೆಟ್ ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಜೊತೆಗೆ 12GB RAM + 256GB ಸ್ಟೋರೇಜ್ ಆಯ್ಕೆಯನ್ನು ಪಡೆದುಕೊಂಡಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ S25 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು 12MP + 10MP ಸೆನ್ಸಾರ್ನ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್ 4,000mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 45W ವೈರ್ಡ್ ಚಾರ್ಜಿಂಗ್ ಹೊಂದಿದೆ.