ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S25 ಸ್ಮಾರ್ಟ್‌ಫೋನ್‌ಗೆ ಈಗ ಭರ್ಜರಿ ಆಫರ್‌!

HIGHLIGHTS

ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 ಫೋನ್‌ಗೆ ಸಖತ್ ರಿಯಾಯಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 ಮೊಬೈಲ್‌ 4,000mAh ಬ್ಯಾಟರಿ ಸಪೋರ್ಟ್ ಪಡೆದಿದೆ

ಸ್ಯಾಮ್‌ಸಂಗ್‌ನ ಈ ಫೋನ್‌ ಸ್ನ್ಯಾಪ್‌ಡ್ರಾಗನ್‌ 8 ಇಲೈಟ್ ಪ್ರೊಸೆಸರ್‌ ಹೊಂದಿದೆ

ಸ್ಯಾಮ್‌ಸಂಗ್‌ ಕಂಪನಿಯ ಜನಪ್ರಿಯ ಮೊಬೈಲ್‌ಗಳಲ್ಲಿ ಒಂದಾದ Samsung Galaxy S25 ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಸ್ನ್ಯಾಪ್‌ಡ್ರಾಗನ್‌ 8 ಇಲೈಟ್ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್‌ 4,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್‌ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಸ್ಕ್ಯಾಮ್ ಮೆಸೆಜ್‌ಗಳಿಂದ ಬಳಕೆದಾರರನ್ನು ರಕ್ಷಿಸಲು WhatsApp ಸಂಸ್ಥೆಯಿಂದ ಹೊಸ ಫೀಚರ್!

Samsung Galaxy S25 ಬೆಲೆಯಲ್ಲಿ ಸಖತ್ ಡಿಸ್ಕೌಂಟ್‌

ಆಕರ್ಷಕ ಕ್ಯಾಮೆರಾ ಹಾಗೂ ಇತರೆ ಫೀಚರ್ಸ್‌ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 1,14,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 68,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್‌ ನೇವಿ ಮತ್ತು ಸಿಲ್ವರ್ ಶ್ಯಾಡೋ ಕಲರ್‌ ಆಯ್ಕೆ ಹೊಂದಿದೆ.

Created Using AI

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಫೋನ್‌ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಪಡೆದಿರುವು ಜೊತೆಗೆ 2600 ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಪಡೆದುಕೊಂಡಿದೆ. ಇನ್ನು ಈ ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಇಲೈಟ್ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಜೊತೆಗೆ 12GB RAM + 256GB ಸ್ಟೋರೇಜ್‌ ಆಯ್ಕೆಯನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ದ್ವಿತೀಯ ಹಾಗೂ ಮೂರನೇ ಕ್ಯಾಮೆರಾಗಳು 12MP + 10MP ಸೆನ್ಸಾರ್‌ನ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್‌ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಫೋನ್‌ 4,000mAh ಬ್ಯಾಟರಿ ಹೊಂದಿದ್ದು ಇದಕ್ಕೆ ಪೂರಕವಾಗಿ 45W ವೈರ್ಡ್ ಚಾರ್ಜಿಂಗ್ ಪಡೆದಿವೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :