ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ S ಸರಣಿಯ ಸ್ಮಾರ್ಟ್‌ಫೋನ್ ಅನ್ನು ಡಿಸ್ಕೌಂಟ್‌ನಲ್ಲಿ ಖರೀದಿಸಲು ಯೋಚಿಸಿದ್ದರೆ ಆನ್‌ಲೈನ್ ಪ್ಲಾಟ್‌ಫಾರ್ಮ್ ನತ್ತ ನೋಡಿ. ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ Samsung Galaxy S25 FE ಮೊಬೈಲ್ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ Exynos 2400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 4,900mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Xiaomi ಕಂಪನಿಯಿಂದ ಹೊಸ ಸ್ಮಾರ್ಟ್‌ಟಿವಿ ಸರಣಿ ಬಿಡುಗಡೆ; ಜಬರ್ದಸ್ತ್ ಸೌಂಡ್ ವ್ಯವಸ್ಥೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB + 128GB ವೇರಿಯಂಟ್ ಬೆಲೆ 59,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 44,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಜೆಟ್ ಬ್ಲ್ಯಾಕ್, ನೇವಿ ಹಾಗೂ ವೈಟ್ ಕಲರ್ ಆಯ್ಕೆಯನ್ನು ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಮೊಬೈಲ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.7 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್ ಸ್ಕ್ರೀನ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ Exynos 2400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ 8GB + 128GB ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 FE ಮೊಬೈಲ್ 45W ವೈರ್ಡ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಜೊತೆಗೆ 4,900mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ. ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಕೆಂಡರಿ ಕ್ಯಾಮೆರಾವು 12MP ಸೆನ್ಸಾರ್ ಹೊಂದಿದ್ದು ತೃತೀಯ ಕ್ಯಾಮೆರಾವು 8MP ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾವನ್ನು ನೀಡಲಾಗಿದೆ. ಇದರ ಜೊತೆಗೆ One UI 8 ನೊಂದಿಗೆ ಇತ್ತೀಚಿನ Android 16 ನಲ್ಲಿ ಕಾರ್ಯನಿರ್ವಹಿಸುತ್ತದೆ.