ಜನಪ್ರಿಯ Samsung Galaxy S25 ಮೊಬೈಲ್ ಬೆಲೆಯಲ್ಲಿ ದಿಢೀರ್ ಏರಿಕೆ! ಹೊಸ ಬೆಲೆ ಗಮನಿಸಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮೊಬೈಲ್ ದರದಲ್ಲಿ ಭಾರೀ ಏರಿಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಟಾಪ್ ಎಂಡ್ ಬೆಲೆಯಲ್ಲಿ 12,000 ರೂ.ಗಳ ಹೆಚ್ಚಳ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸ್ನ್ಯಾಪ್‌ಡ್ರಾಗನ್ 8 ಇಲೈಟ್ ಪ್ರೊಸೆಸರ್ ಒಳಗೊಂಡಿದೆ
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ S ಸರಣಿಯ ಕೆಲವು ಸ್ಮಾರ್ಟ್‌ಫೋನ್‌ಗಳು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಆದರೆ ಇದೀಗ ಸ್ಯಾಮ್‌ಸಂಗ್ ಸಂಸ್ಥೆಯ Samsung Galaxy S25 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಏರಿಕೆ ಆಗಿದ್ದು ಖರೀದಿದಾರರು ಅಚ್ಚರಿಪಡುವಂತೆ ಆಗಿದೆ. ಸ್ಯಾಮ್‌ಸಂಗ್ ಈ ಮೊಬೈಲ್ 12GB + 512GB ಬೆಲೆಯಲ್ಲಿ 12,000 ರೂ.ಗಳ ಪರಿಷ್ಕರಣೆ ಮಾಡಿರುವುದರಿಂದ ಹೊಸ ಫೋನ್ ಖರೀದಿಸುವ ಗ್ರಾಹಕರು ಎರಡು ಬಾರಿ ಯೋಚಿಸುವಂತಾಗಿದೆ. ಅಂದಹಾಗೆ ಈ ಫೋನ್ ಸ್ನ್ಯಾಪ್‌ಡ್ರಾಗನ್ 8 ಇಲೈಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್ 4,000mAh ಬ್ಯಾಟರಿ ಸಪೋರ್ಟ್ ಒಳಗೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಫೋನಿನ ಹೊಸ ಬೆಲೆ ಹಾಗೂ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : Google Pixel 11 Pro Fold vs Samsung Galaxy Z Fold 8 Ultra: ಖರೀದಿಗೆ ಯಾವುದು ಬೆಸ್ಟ್?
Samsung Galaxy S25 ಮೊಬೈಲ್ ಬೆಲೆಯಲ್ಲಿ ಏರಿಕೆ
ಭಾರತದಲ್ಲಿ ಸ್ಯಾಮ್‌ಸಂಗ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಏರಿಕೆ ಆಗಿದೆ. ಈ ಮೊಬೈಲ್‌ನ 12GB + 256GB ಸ್ಟೋರೇಜ್ ವೇರಿಯಂಟ್ ಹಳೆಯ ದರ 80,999 ರೂ.ಗಳು ಆಗಿದ್ದರೆ, ಹೊಸ ಬೆಲೆ 84,999 ರೂ.ಗಳು ಆಗಿದೆ. ಇನ್ನು 12GB + 512GB ಸ್ಟೋರೇಜ್ ವೇರಿಯಂಟ್ ಹಳೆಯ ದರ 92,999 ರೂ.ಗಳು ಆಗಿದ್ದರೆ, ಹೊಸ ಪ್ರೈಸ್‌ಟ್ಯಾಗ್ 1,04,999 ರೂ.ಗಳು ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಫೀಚರ್ಸ್ ಹೀಗಿವೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಮೊಬೈಲ್ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದರ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿರುವು ಜೊತೆಗೆ 2600 ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಇಲೈಟ್ ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಓಎಸ್ ಜೊತೆಗೆ 12GB RAM + 256GB ಸ್ಟೋರೇಜ್ ಆಯ್ಕೆಯನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು 12MP + 10MP ಸೆನ್ಸಾರ್‌ನ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಅಲ್ಲದೇ ಈ ಮೊಬೈಲ್ 4,000mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು ಇದಕ್ಕೆ ಪೂರಕವಾಗಿ 45W ವೈರ್ಡ್ ಚಾರ್ಜಿಂಗ್ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
