12GB RAM ಇರುವ Samsung Galaxy S25 Ultra 5G ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

HIGHLIGHTS

ಸ್ಯಾಮ್‌ಸಂಗ್‌ನ ಈ ದೈತ್ಯ ಫೋನ್‌ ಈಗ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಹೊಂದಿದೆ

ಈ ಮೊಬೈಲ್‌ ವೈಟ್‌ಸಿಲ್ವರ್, ಬ್ಲ್ಯಾಕ್, ಗ್ರೇ ಮತ್ತು ಸಿಲ್ವರ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯ

ಆಫರ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗೆ ಅಮೆಜಾನ್‌ ಆಯೋಜಿಸಿರುವ Amazon Great Summer Sale ಅತ್ಯುತ್ತಮ ಪ್ಲಾಟ್‌ಫಾರ್ಮ್ ಆಗಿದೆ. ಈ ಮಾರಾದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಭಾರೀ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಸ್ಯಾಮ್‌ಸಂಗ್ ಕಂಪನಿಯ Samsung Galaxy S25 Ultra 5G ಮೊಬೈಲ್‌ ಸಹ ಆಕರ್ಷಕ ಬೆಲೆ ಇಳಿಕೆಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 8 ಎಲೈಟ್ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಆಂಡ್ರಾಯ್ಡ್‌ 17 ಫೀಚರ್ಸ್‌ ಪ್ರಕಟಿಸಿದ Google; ಗಮನ ಸೆಳೆಯುವ ಹೊಸ AI ಆಯ್ಕೆಗಳು

Samsung Galaxy S25 Ultra 5G ಬೆಲೆಯಲ್ಲಿ ಇಳಿಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್‌ ಸ್ಟೈಲಿಶ್‌ ಲುಕ್‌ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಸದ್ಯ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭಾರೀ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ 12GB + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆ 1,29,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 99,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಫೋನ್‌ ಟೈಟಾನಿಯಂ ವೈಟ್‌ಸಿಲ್ವರ್, ಟೈಟಾನಿಯಂ ಬ್ಲ್ಯಾಕ್, ಟೈಟಾನಿಯಂ ಗ್ರೇ ಮತ್ತು ಟೈಟಾನಿಯಂ ಸಿಲ್ವರ್ ಬ್ಲೂ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮೂಲಕ ಖರೀದಿಸಬಹುದಾಗಿದೆ. ಈ ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್‌ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್‌ ಡಿಸ್‌ಪ್ಲೇಯು 6.6.9 ಇಂಚಿನ ಬೃಹತ್ ಡೈನಾಮಿಕ್ LTPO AMOLED 2X ಮಾದರಿಯ ಡಿಸ್‌ಪ್ಲೇ ರಚನೆ ಹೊಂದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಹೊಂದಿದ್ದು 1440×3120 ಪಿಕ್ಸೆಲ್‌ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಇನ್ನು ಈ ಮೊಬೈಲ್‌ ಸ್ನಾಪ್‌ಡ್ರಾಗನ್ 8 ಎಲೈಟ್ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 12GB ವರೆಗೆ RAM ಮತ್ತು 1TB ವರೆಗೆ ಆಂತರಿಕ ಮೆಮೊರಿಯನ್ನು ಸಹ ಒಳಗೊಂಡಿದೆ.

ಅಲ್ಲದೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್‌ ನಾಲ್ಕು ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 200MP ಸೆನ್ಸಾರ್‌ ಅನ್ನು ಒಳಗೊಂಡಿದ್ದು, ದ್ವಿತೀಯ ಕ್ಯಾಮೆರಾ 50MP ಟೆಲಿಫೋಟೋ ಸೆನ್ಸಾರ್ ಹೊಂದಿದೆ. ಇನ್ನೆರಡು ಕ್ಯಾಮೆರಾಗಳು 10MP ಟೆಲಿಫೋಟೋ ಮತ್ತು 50MP ವೈಡ್-ಆಂಗಲ್ ಸೆನ್ಸಾರ್‌ ಹೊಂದಿವೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್‌ 12MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ 5,000 mAh ಬ್ಯಾಟರಿಯನ್ನು ಒಳಗೊಂಡಿದ್ದು, ಇದು 45W ವರೆಗೆ ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಪಡೆದಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :