ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯ ಇತ್ತೀಚಿನ Samsung Galaxy S26 Plus ಮೊಬೈಲ್ ಹೈ ಎಂಡ್ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ರಿಲಾಯನ್ಸ್ ಡಿಜಿಟಲ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ Exynos 2600 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ರಿಲಾಯನ್ಸ್ ಡಿಜಿಟಲ್ ಇ ಕಾಮರ್ಸ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರತದಲ್ಲಿ Moto Pad 70 Pro ಟ್ಯಾಬ್ ಲಾಂಚ್! 10,200mAh ಬ್ಯಾಟರಿ ಸಪೋರ್ಟ್
ಆಕರ್ಷಕ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಮೊಬೈಲ್ ರಿಲಾಯನ್ಸ್ ಡಿಜಿಟಲ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 512GB ಸ್ಟೋರೇಜ್ ವೇರಿಯಂಟ್ ಬೆಲೆ 1,39,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 1,14,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಮೊಬೈಲ್ 6.7 ಇಂಚಿನ QHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ ವಿಷನ್ ಬೂಸ್ಟರ್ ಅನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ ಸಂಸ್ಥೆಯ Exynos 2600 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು One UI 8.5 ಒಳಗೊಂಡ Android 16 ಓಎಸ್ ಸಪೋರ್ಟ್ ಕೂಡಾ ಪಡೆದಿದೆ. ಇನ್ನು ಈ ಮೊಬೈಲ್ 12 + 512GB ಮತ್ತು 12 + 256GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50MP ವೈಡ್ ಲೆನ್ಸ್ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಇದರ ಸೆಕೆಂಡರಿ ಕ್ಯಾಮೆರಾವು 12MP ಅಲ್ಟ್ರಾ ವೈಡ್ ಲೆನ್ಸ್ ಪಡೆದಿದ್ದರೆ ತೃತೀಯ ಕ್ಯಾಮೆರಾವು 10MP ಟೆಲಿಫೋಟೋ ಲೆನ್ಸ್ ಸಾಮರ್ಥ್ಯದಲ್ಲಿ ಇವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾ ರಚನೆಯನ್ನು ನೀಡಲಾಗಿದೆ.
ಹಾಗೆಯೇ ಈ ಸ್ಮಾರ್ಟ್‌ಫೋನ್ 4,900mAh ಬ್ಯಾಟರಿ ಬ್ಯಾಕ್‌ಅಪ್ ಬೆಂಬಲದ ಜೊತೆಗೆ 45W ವೈರ್ಡ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇದು ಸುಮಾರು 30 ನಿಮಿಷಗಳ ಚಾರ್ಜ್‌ನಲ್ಲಿ 69% ವರೆಗೆ ಚಾರ್ಜ್ ಒದಗಿಸಬಲ್ಲದು. ಇದಲ್ಲದೇ ಸೂಪರ್ ಫಾಸ್ಟ್ ವೈರ್‌ಲೆಸ್ ಚಾರ್ಜಿಂಗ್ ಹಾಗೂ ವೈರ್‌ಲೆಸ್ ಪವರ್‌ಶೇರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇದರೊಂದಿಗೆ 5G, LTE, ವೈ-ಫೈ 7, ವೈ-ಫೈ ಡೈರೆಕ್ಟ್ ಹಾಗೂ ಬ್ಲೂಟೂತ್ v 6.0 ನಂತಹ ಕನೆಕ್ಟಿವಿಟಿ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಫೋನ್ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಸೌಲಭ್ಯ ಹೊಂದಿದೆ.