ಭಾರತದಲ್ಲಿ Samsung Galaxy S26 Plus ಲಾಂಚ್! ಅತ್ಯುತ್ತಮ ಕ್ಯಾಮೆರಾ, ಜಬರ್ದಸ್ತ್ ಫೀಚರ್ಸ್
Samsung Galaxy S26 Plus: ಸ್ಯಾಮ್‌ಸಂಗ್ ಸಂಸ್ಥೆಯ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಇಂದು (ಫೆಬ್ರವರಿ 25 ರಂದು) ಅಧಿಕೃತವಾಗಿ ಲಾಂಚ್ ಆಗಿದೆ. ದಕ್ಷಿಣ ಕೊರಿಯಾದ ಟೆಕ್ ದೊಡ್ಡಣ್ಣ ಸ್ಯಾಮ್‌ಸಂಗ್ ಕಂಪನಿಯು ತನ್ನ ಗ್ಯಾಲಕ್ಸಿ ಅನ್‌ಪ್ಯಾಕ್ಡ್ 2026 ಕಾರ್ಯಕ್ರಮದಲ್ಲಿ ಈ ಮೊಬೈಲ್ ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಫೋನ್ Exynos 2600 ಚಿಪ್‌ಸೆಟ್ ಪ್ರೊಸೆಸರ್ ಒಳಗೊಂಡಿರುವ ಜೊತೆಗೆ 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ನೂತನ ಮೊಬೈಲ್ 4,900mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್‌ನೊಂದಿಗೆ ಮಾರುಕಟ್ಟೆ ಎಂಟ್ರಿ ಕೊಟ್ಟಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಮೊಬೈಲ್‌ನ ಲಭ್ಯತೆ, ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಕರ್ವ್ ಡಿಸ್‌ಪ್ಲೇ ಇರುವ Motorola Edge 60 Pro ಬೆಲೆಯಲ್ಲಿ ಭಾರೀ ಇಳಿಕೆ! 6000mAh ಬ್ಯಾಟರಿ ಸಪೋರ್ಟ್
Samsung Galaxy S26 Plus ಫೀಚರ್ಸ್ ಹೀಗಿವೆ
ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಕೆಲವು ಅಪ್‌ಗ್ರೇಡ್ ಫೀಚರ್ಸ್‌ಗಳನ್ನು ಹೊಂದಿದೆ. ಈ ಮೊಬೈಲ್ 6.7 ಇಂಚಿನ QHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ ವಿಷನ್ ಬೂಸ್ಟರ್ ಅನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ ಸಂಸ್ಥೆಯ Exynos 2600 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅಲ್ಲದೇ ಇದು One UI 8.5 ಒಳಗೊಂಡ Android 16 ಓಎಸ್ ಸಪೋರ್ಟ್ ಕೂಡಾ ಪಡೆದಿದೆ. ಇನ್ನು ಈ ಮೊಬೈಲ್ 12 + 512GB ಮತ್ತು 12 + 256GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50MP ವೈಡ್ ಲೆನ್ಸ್ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಇದರ ಸೆಕೆಂಡರಿ ಕ್ಯಾಮೆರಾವು 12MP ಅಲ್ಟ್ರಾ ವೈಡ್ ಲೆನ್ಸ್ ಪಡೆದಿದ್ದರೆ ತೃತೀಯ ಕ್ಯಾಮೆರಾವು 10MP ಟೆಲಿಫೋಟೋ ಲೆನ್ಸ್ ಸಾಮರ್ಥ್ಯದಲ್ಲಿ ಇವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾ ರಚನೆಯನ್ನು ನೀಡಲಾಗಿದೆ.
ಹಾಗೆಯೇ ಈ ಸ್ಮಾರ್ಟ್‌ಫೋನ್ 4,900mAh ಬ್ಯಾಟರಿ ಬ್ಯಾಕ್‌ಅಪ್ ಬೆಂಬಲದ ಜೊತೆಗೆ 45W ವೈರ್ಡ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇದು ಸುಮಾರು 30 ನಿಮಿಷಗಳ ಚಾರ್ಜ್‌ನಲ್ಲಿ 69% ವರೆಗೆ ಚಾರ್ಜ್ ಒದಗಿಸಬಲ್ಲದು. ಇದಲ್ಲದೇ ಸೂಪರ್ ಫಾಸ್ಟ್ ವೈರ್‌ಲೆಸ್ ಚಾರ್ಜಿಂಗ್ ಹಾಗೂ ವೈರ್‌ಲೆಸ್ ಪವರ್‌ಶೇರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇದರೊಂದಿಗೆ 5G, LTE, ವೈ-ಫೈ 7, ವೈ-ಫೈ ಡೈರೆಕ್ಟ್ ಹಾಗೂ ಬ್ಲೂಟೂತ್ v 6.0 ನಂತಹ ಕನೆಕ್ಟಿವಿಟಿ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಫೋನ್ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಸೌಲಭ್ಯ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಲಭ್ಯತೆ
ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿ ಇದೀಗ ಮಾರುಕಟ್ಟೆಗೆ ಪ್ರವೇಶಿಸಿದೆ. ಈ ಸರಣಿಯಲ್ಲಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಪ್ಲಸ್ ಮೊಬೈಲ್ ಇಂದಿನಿಂದ (ಫೆ 25 ರಿಂದ) ಪ್ರಿ-ಆರ್ಡರ್‌ಗೆ ಲಭ್ಯವಿರುತ್ತದೆ. ಭಾರತದಲ್ಲಿ ಈ ಫೋನಿನ 12GB + 512GB ವೇರಿಯಂಟ್ ಬೆಲೆ 1,19,999 ರೂ.ಗಳು ಆಗಿದೆ. ಈ ಸ್ಮಾರ್ಟ್‌ಫೋನ್ ಕೋಬಾಲ್ಟ್ ವೈಲೇಟ್, ವೈಟ್, ಬ್ಲ್ಯಾಕ್ ಹಾಗೂ ಸ್ಕೈ ಬ್ಲೂ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಕಂಪನಿಯ ವೆಬ್‌ಸೈಟ್‌ನಲ್ಲಿ ಎಕ್ಸ್‌ಕ್ಲೂಸಿವ್‌ಗಾಗಿ ಪಿಂಕ್ ಮತ್ತು ಸಿಲ್ವರ್ ಬಣ್ಣಗಳಲ್ಲಿ ಸಹ ಲಭ್ಯವಾಗಲಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile