ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Samsung Galaxy Z Flip 8 ಮೊಬೈಲ್‌! ಸಖತ್ ಫೀಚರ್ಸ್‌

HIGHLIGHTS

ಸ್ಯಾಮ್‌ಸಂಗ್‌ನ ಈ ಮೊಬೈಲ್‌ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ

ಸ್ಯಾಮ್‌ಸಂಗ್‌ ಈ ಫೋನ್ 4,300mAh ಡ್ಯುಯಲ್ ಬ್ಯಾಟರಿ ಪಡೆದಿದೆ

ಈ ಸ್ಮಾರ್ಟ್‌ಫೋನ್‌ ಗ್ರಾಫೈಟ್‌, ಕ್ರೀಮ್‌ ಹಾಗೂ ಲ್ಯಾವೆಂಡರ್‌ ಬಣ್ಣಗಳ ಆಯ್ಕೆಯಲ್ಲಿ ಲಭ್ಯ

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ತನ್ನ ಬಹುನಿರೀಕ್ಷಿತ Samsung Galaxy Z Flip 8 ಸ್ಮಾರ್ಟ್‌ಫೋನ್‌ ಅನ್ನು ಇಂದು ಅಧಿಕೃತವಾಗಿ ಲಾಂಚ್‌ ಮಾಡಿದೆ. ಫ್ಲ್ಯಾಗ್‌ಶಿಪ್‌ ರೇಂಜ್‌ನಲ್ಲಿ ಎಂಟ್ರಿ ಕೊಟ್ಟಿರುವ ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ Exynos 2600 ಚಿಪ್‌ಸೆಟ್ ಪ್ರೊಸೆಸರ್‌ ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ 4,300mAh ಡ್ಯುಯಲ್‌ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಹಾಗೆಯೇ ಇದು 50MP ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಫೋನ್‌ ಗ್ರಾಫೈಟ್‌, ಕ್ರೀಮ್‌ ಹಾಗೂ ಲ್ಯಾವೆಂಡರ್‌ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 8 ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಕಡಿಮೆ ಬೆಲೆಯ ರೀಚಾರ್ಜ್‌ನಲ್ಲಿ ಅಧಿಕ ಡೇಟಾ ಜೊತೆಗೆ OTT ಸೌಲಭ್ಯ ಬೇಕಿದ್ರೆ, ಈ ಪ್ಲಾನ್‌ ಬೆಸ್ಟ್‌!

Samsung Galaxy Z Flip 8 ಮಾಹಿತಿ

ಸ್ಯಾಮ್‌ಸಂಗ್‌ ಕಂಪನಿಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 8 ಮೊಬೈಲ್‌ ಆಕರ್ಷಕ ದೈತ್ಯ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ಮೊಬೈಲ್‌ನ ಎರಡು ಸ್ಟೋರೇಜ್‌ ವೇರಿಯಂಟ್‌ಗಳನ್ನು ಒಳಗೊಂಡಿದೆ. ಇನ್ನು ಈ ನೂತನ ಸ್ಮಾರ್ಟ್‌ಫೋನ್‌ ಗ್ರಾಫೈಟ್‌, ಕ್ರೀಮ್‌ ಹಾಗೂ ಲ್ಯಾವೆಂಡರ್‌ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ.

– 12GB RAM + 256GB

– 12GB RAM + 512GB

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 8 ಮೊಬೈಲ್‌ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 8 ಮೊಬೈಲ್‌ 6.9 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಈ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಪಡೆದಿದೆ. ಹಾಗೆಯೇ ಇದರ ಕವರ್‌ ಸ್ಕ್ರೀನ್‌ 4.1 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಒಳಗೊಂಡಿದೆ. ಈ ಫೋನ್‌ ಆಕ್ಟಾ ಕೋರ್ Exynos 2600 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB + 512GB ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್‌ 17 ಆಧಾರಿತ One UI 9 ಓಎಸ್ ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್‌ 8 ಮೊಬೈಲ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 12MP ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 10MP ಕ್ಯಾಮೆರಾ ಒದಗಿಸಲಾಗಿದೆ. ಅಲ್ಲದೇ ಈ ಫೋನ್‌ 4,300mAh ಡ್ಯುಯಲ್‌ ಬ್ಯಾಟರಿ ಸಪೋರ್ಟ್‌ ಜೊತೆಗೆ 25W ವೈರ್ಡ್ ಹಾಗೂ 15W ವೈರ್‌ಲೆಸ್‌ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :