ಟೆಕ್ ದೊಡ್ಡಣ್ಣ ಸ್ಯಾಮ್‌ಸಂಗ್ ಕಂಪನಿಯು ತನ್ನ ಹೊಸ Samsung Galaxy Z Fold 8 Ultra ದೈತ್ಯ ಸ್ಮಾರ್ಟ್‌ಫೋನ್ ಅನ್ನು ಇಂದು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಹೈ ಎಂಡ್ ಫ್ಲ್ಯಾಗ್‌ಶಿಪ್ ವಿಭಾಗದಲ್ಲಿ ಲಗ್ಗೆ ಇಟ್ಟಿರುವ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 ಎಲೈಟ್ ಜನ್ 5 ಚಿಪ್‌ಸೆಟ್ ಪ್ರೊಸೆಸರ್ ಪಡೆದುಕೊಂಡಿದೆ. ಅಲ್ಲದೇ ಈ ಫೋನ್ 5,000mAh ಡ್ಯುಯಲ್ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಹಾಗೆಯೇ ಇದು 50MP ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಫೋನ್ ಗ್ರ್ಯಾಫೈಟ್, ಕ್ರೀಮ್, ವೈಲೇಟ್ ಶ್ಯಾಡೋ ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಅಲ್ಟ್ರಾ ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಕಡಿಮೆ ಬೆಲೆಯ ರೀಚಾರ್ಜ್‌ನಲ್ಲಿ ಅಧಿಕ ಡೇಟಾ ಜೊತೆಗೆ OTT ಸೌಲಭ್ಯ ಬೇಕಿದ್ರೆ, ಈ ಪ್ಲಾನ್ ಬೆಸ್ಟ್!
ಸ್ಯಾಮ್‌ಸಂಗ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಅಲ್ಟ್ರಾ ಮೊಬೈಲ್ ಆಕರ್ಷಕ ದೈತ್ಯ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ಮೊಬೈಲ್‌ನ ಮೂರು ಸ್ಟೋರೇಜ್ ವೇರಿಯಂಟ್‌ಗಳನ್ನು ಒಳಗೊಂಡಿದೆ. ಇನ್ನು ಈ ನೂತನ ಸ್ಮಾರ್ಟ್‌ಫೋನ್ ಗ್ರ್ಯಾಫೈಟ್, ಕ್ರೀಮ್, ವೈಲೇಟ್ ಶ್ಯಾಡೋ ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ.
– 12GB RAM + 256GB
– 12GB RAM + 512GB
– 16GB RAM + 1TB
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಅಲ್ಟ್ರಾ ಮೊಬೈಲ್ 8.0 ಇಂಚಿನ QXGA+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಈ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಪಡೆದಿದೆ. ಹಾಗೆಯೇ ಇದರ ಕವರ್ ಸ್ಕ್ರೀನ್ 6.5 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಒಳಗೊಂಡಿದೆ. ಈ ಫೋನ್ ಸ್ನಾಪ್‌ಡ್ರಾಗನ್ 8 ಎಲೈಟ್ ಜನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 12GB + 256GB, 12GB + 512GB ಹಾಗೂ 16GB RAM + 1TB ವೇರಿಯಂಟ್ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್ 17 ಆಧಾರಿತ One UI 9 ಓಎಸ್ ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಅಲ್ಟ್ರಾ ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 200MP ವೈಲ್ಡ್ ಆಂಗಲ್ ಸೆನ್ಸಾರ್ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 50MP ಅಲ್ಟ್ರಾ ವೈಡ್ ಸೆನ್ಸಾರ್ ಸೌಲಭ್ಯ ಪಡೆದಿದೆ. ತೃತೀಯ ಕ್ಯಾಮೆರಾವು 10MP ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 10MP ಕ್ಯಾಮೆರಾ ಒದಗಿಸಲಾಗಿದೆ. ಅಲ್ಲದೇ ಕವರ್ ಕ್ಯಾಮೆರಾ ಸಹ 10MP ಸೆನ್ಸಾರ್ ಸೌಲಭ್ಯ ಪಡೆದುಕೊಂಡಿದೆ. ಇದು 5,000mAh ಡ್ಯುಯಲ್ ಬ್ಯಾಟರಿ ಸಪೋರ್ಟ್ ಜೊತೆಗೆ 45W ವೈರ್ಡ್ ಹಾಗೂ 20W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.