5000mAh ಬ್ಯಾಟರಿ ಇರುವ ಈ ಮೊಬೈಲ್‌ ಜಸ್ಟ್‌ 8,999 ರೂ.ಗಳಿಗೆ ಲಭ್ಯ! ಬೆಸ್ಟ್‌ ಆಫರ್‌ ಇದೆ

HIGHLIGHTS

ಅಮೆಜಾನ್‌ನಲ್ಲಿ ಟೆಕ್ನೋ ಪಾಪ್ X ಫೋನ್‌ಗೆ ಜಬರ್ದಸ್ತ್‌ ಆಫರ್‌

ಟೆಕ್ನೋ ಕಂಪನಿಯ ಈ ಫೋನ್‌ 5000mAh ಬ್ಯಾಟರಿ ಪಡೆದುಕೊಂಡಿದೆ

ಟೆಕ್ನೋ ಪಾಪ್ X ಮೊಬೈಲ್‌ UNISOC T7250 12nm ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ

5000mAh ಬ್ಯಾಟರಿ ಇರುವ ಈ ಮೊಬೈಲ್‌ ಜಸ್ಟ್‌ 8,999 ರೂ.ಗಳಿಗೆ ಲಭ್ಯ! ಬೆಸ್ಟ್‌ ಆಫರ್‌ ಇದೆ

ಕಡಿಮೆ ಬೆಲೆಯಲ್ಲಿ ಬಿಗ್‌ ಬ್ಯಾಟರಿ ಸೌಲಭ್ಯವಿರುವ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಖರೀದಿಸಲು ಯೋಚಿಸಿದ್ದರೆ ಇಲ್ಲಿದೆ ಬೆಸ್ಟ್‌ ಆಯ್ಕೆ. ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ TECNO POP X ಮೊಬೈಲ್‌ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸ್ಯಾಮ್‌ಸಂಗ್‌ ಸಂಸ್ಥೆಯ ಈ ಮೊಬೈಲ್‌ ಆಕ್ಟಾ ಕೋರ್ UNISOC T7250 12nm ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ 5000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಹೊಂದಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಟೆಕ್ನೋ ಪಾಪ್ X ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio ಟೆಲಿಕಾಂನ ಈ ಪ್ಲಾನ್‌ನಲ್ಲಿ ಪ್ರತಿದಿನ 2.5GB ಡೇಟಾ ಜೊತೆಗೆ 365 ದಿನಗಳ ವ್ಯಾಲಿಡಿಟಿ!

5000mAh ಬ್ಯಾಟರಿಯ TECNO POP X ಫೋನ್‌ ಬೆಲೆಯಲ್ಲಿ ಇಳಿಕೆ

ಟೆಕ್ನೋ ಕಂಪನಿಯ ಟೆಕ್ನೋ ಪಾಪ್ X ಮೊಬೈಲ್‌ 5000mAh ಬ್ಯಾಟರಿ ಮೂಲಕ ಗಮನ ಸೆಳೇದಿದೆ. ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 4GB + 64GB ವೇರಿಯಂಟ್‌ ಬೆಲೆ 15,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 8,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಚಿಲ್ಲಿ ಗ್ರೀನ್‌ ಮತ್ತು ವೈಟ್‌ ಕಲರ್‌ ಆಯ್ಕೆಯನ್ನು ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್‌ ತಾಣದ ಮೂಲಕ ಖರೀದಿಸಬಹುದಾಗಿದೆ.

5000mAh

ಟೆಕ್ನೋ ಪಾಪ್ X ಫೋನ್‌ ಫೀಚರ್ಸ್‌ ಹೀಗಿವೆ

ಇತ್ತೀಚಿನ ಟೆಕ್ನೋ ಪಾಪ್ X ಮೊಬೈಲ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.75 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್‌ 20:9 ಸ್ಕ್ರೀನ್ ಅನುಪಾತ ಹೊಂದಿರುವ ಜೊತೆಗೆ 1600 x 720 ಪಿಕ್ಸೆಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ ಈ ನೂತನ ಫೋನ್‌ ಕ್ವಾಲ್ಕಾಮ್ 1.8 GHz ಆಕ್ಟಾ-ಕೋರ್ UNISOC T7250 12nm ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ.

ಇನ್ನು ಹೊಸ ಟೆಕ್ನೋ ಪಾಪ್ X ಮೊಬೈಲ್‌ 15W ವೈರ್ಡ್ ಚಾರ್ಜಿಂಗ್ ಬೆಂಬಲಿತ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾವನ್ನು ನೀಡಲಾಗಿದೆ. ಇದರ ಜೊತೆಗೆ ಈ ಮೊಬೈಲ್‌ ಧೂಳು ಮತ್ತು ಸ್ಪ್ಲಾಶ್ ನಿರೋಧಕಕ್ಕಾಗಿ IP64 ರೇಟಿಂಗ್ ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo