ಹೊಸ Tecno Pova 8 5G ಮೊಬೈಲ್‌ ಮಾರಾಟ ನಾಳೆ ಪ್ರಾರಂಭ! ಬೆಲೆ ಹಾಗೂ ಫೀಚರ್ಸ್‌

HIGHLIGHTS

ನಾಳೆ (ಜೂನ್‌ 18 ರಂದು) ಟೆಕ್ನೋ ಪೋವಾ 8 5G ಸೇಲ್‌ ಶುರು

ಟೆಕ್ನೋ ಪೋವಾ 8 5G ಫೋನ್‌ 50MP ಪ್ರಾಥಮಿಕ ಕ್ಯಾಮೆರಾ ಸೌಲಭ್ಯ ಪಡೆದಿದೆ

ಈ ಮೊಬೈಲ್‌ ಟರ್ಮಿನಲ್‌ ಗ್ರೀನ್‌ ಮತ್ತು 16 ಬಿಟ್‌ ವೈಟ್‌ ಕಲರ್ ಆಯ್ಕೆ ಹೊಂದಿದೆ

ಬಜೆಟ್‌ ದರದ ಮೊಬೈಲ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಟೆಕ್ನೋ ಕಂಪನಿಯು ದೇಶೀಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಹೊಸದಾಗಿ ಪರಿಚಯಿಸಿರುವ Tecno Pova 8 5G ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ನಾಳೆ (ಜೂನ್‌ 18 ರಂದು) ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7100 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ ಇದರ ಡಿಸ್‌ಪ್ಲೇಯು 144Hz ರಿಫ್ರೆಶ್ ರೇಟ್‌ ಪಡೆದಿರುವುದು ಹೈಲೈಟ್‌ ಎನಿಸಿದೆ. ಹಾಗೆಯೇ ಇದು 50MP ಪ್ರಾಥಮಿಕ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಹಾಗಾದರೇ ಟೆಕ್ನೋ ಪೋವಾ 8 5G ಸ್ಮಾರ್ಟ್‌ಫೋನ್‌ ಸೇಲ್‌, ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 80W SuperVOOC ಚಾರ್ಜಿಂಗ್ ಇರುವ Oppo F33 5G ಫೋನ್‌ ಈಗ ಆಫರ್‌ನಲ್ಲಿ ಲಭ್ಯ!

ನಾಳೆ Tecno Pova 8 5G ಖರೀದಿಗೆ ಲಭ್ಯ

ಹೊಸ ಟೆಕ್ನೋ ಪೋವಾ 8 5G ಫೋನ್‌ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ ನಾಳೆ (ಜೂನ್‌ 18 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಮೊದಲ ಸೇಲ್‌ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ 6GB + 128GB ಸ್ಟೋರೇಜ್‌ ವೇರಿಯಂಟ್‌ 29,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 31,999 ರೂ.ಗಳು ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟರ್ಮಿನಲ್‌ ಗ್ರೀನ್‌ ಮತ್ತು 16 ಬಿಟ್‌ ವೈಟ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಟೆಕ್ನೋ ಪೋವಾ 8 5G ಫೀಚರ್ಸ್‌ ಮಾಹಿತಿ

ಟೆಕ್ನೋ ಪೋವಾ 8 5G ಸ್ಮಾರ್ಟ್‌ಫೋನ್‌ 6.76 ಇಂಚಿನ FHD+ IPS LCD ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 144Hz ರಿಫ್ರೆಶ್ ರೇಟ್‌ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7100 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 6GB + 128GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಆಂಡ್ರಾಯ್ಡ್ 16 OS ನಲ್ಲಿ ಕಾರ್ಯನಿರ್ವಹಿಸುತ್ತದೆ.

ಟೆಕ್ನೋ ಪೋವಾ 8 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಇದರ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 13MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 45W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :