Tecno ಮೊಬೈಲ್ ಬ್ರ್ಯಾಂಡ್ ಇತ್ತೀಚಿಗೆ ಬಿಡುಗಡೆ ಮಾಡಿರುವ Tecno Pova Curve 2 5G ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಫೋನಿನ ಮಾರಾಟ ನಾಳೆ (ಫೆಬ್ರವರಿ 20 ರಿಂದ) ಪ್ರಾರಂಭವಾಗಲಿದೆ. ಈ ಮೊಬೈಲ್ MediaTek Dimensity 7100 ಪ್ರೊಸೆಸರ್ ಪವರ್ ಅನ್ನು ಒಳಗೊಂಡಿರುವ ಜೊತೆಗೆ ಬರೋಬ್ಬರಿ 8,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ Tecno Pova Curve 2 5G ಸ್ಮಾರ್ಟ್‌ಫೋನ್ ಮೂರು ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ Tecno Pova Curve 2 5G ಸ್ಮಾರ್ಟ್‌ಫೋನ್ ಬೆಲೆ, ಲಭ್ಯತೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Google Pixel 10a ಭಾರತದಲ್ಲಿ ಬಿಡುಗಡೆ! Tensor G4 ಪ್ರೊಸೆಸರ್, 48MP ಕ್ಯಾಮೆರಾ ಸೌಲಭ್ಯ ಪಡೆದಿದೆ
Tecno ಸಂಸ್ಥೆಯ Tecno Pova Curve 2 5G ಮೊಬೈಲ್ ನಾಳೆ (ಫೆ 20 ರಿಂದ) ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಮಧ್ಯಾಹ್ನ 12 ಗಂಟೆಗೆ ಸೇಲ್ ಪ್ರಾರಂಭಿಸಲಿದೆ. ಇನ್ನು ಈ ಫೋನಿನ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 27,999 ರೂಗಳು ಆಗಿದೆ. ಹಾಗೆಯೇ 8GB + 256GB ವೇರಿಯಂಟ್ ಮೊಬೈಲ್ 29,999 ರೂಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಮೊಬೈಲ್ ಸ್ಟಾರ್ಮ್ ಟೈಟಾನಿಯಂ, ಮೆಲ್ಟಿಂಗ್ ಸಿಲ್ವರ್ ಮತ್ತು ಮಿಸ್ಟಿಕ್ ಪರ್ಪಲ್ ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಆರಂಭಿಕ ಕೊಡುಗೆಯಾಗಿ ಗ್ರಾಹಕರು ಅರ್ಹ ಬ್ಯಾಂಕ್ ರಿಯಾಯಿತಿಗಳೊಂದಿಗೆ ರೂ. 3,000 ವರೆಗಿನ ಡಿಸ್ಕೌಂಟ್ ಪಡೆಯಬಹುದು.
Tecno Pova Curve 2 5G ಸ್ಮಾರ್ಟ್‌ಫೋನ್ 144Hz ರಿಫ್ರೆಶ್ ರೇಟ್ ಸೌಲಭ್ಯ ಒಳಗೊಂಡ 6.78 ಇಂಚಿನ ಕರ್ವ್ಡ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಇದರ ಸ್ಕ್ರೀನ್ 1,080 x 2,364 ಪಿಕ್ಸೆಲ್‌ಗಳು ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದು 4,500 nits ಬ್ರೈಟ್ನೆಸ್ ಸಪೋರ್ಟ್ ಜೊತೆಗೆ ಡಿಸ್‌ಪ್ಲೇ ಮೇಲ್ಭಾಗದಲ್ಲಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಪಡೆದಿದೆ. ಅಂದಹಾಗೆ ಈ ಫೋನ್ MediaTek Dimensity 7100 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು ಇದರೊಂದಿಗೆ 8GB RAM ಮತ್ತು 256GB ವರೆಗೆ ಆನ್‌ಬೋರ್ಡ್ ಸ್ಟೋರೇಜ್ ಆಯ್ಕೆ ಪಡೆದಿದೆ.
ಇನ್ನು Tecno Pova Curve 2 5G ಸ್ಮಾರ್ಟ್‌ಫೋನ್ 8,000mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿರುವ ಜೊತೆಗೆ 45W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ 16.4 ಗಂಟೆಗಳ ವೀಡಿಯೊ ಪ್ಲೇಬ್ಯಾಕ್, 35.7 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್, 48.1 ಗಂಟೆಗಳ ಕರೆ ಸಮಯ ಅನ್ನು ನೀಡುತ್ತದೆ ಎಂದು ಟೆಕ್ನೋ ಹೇಳಿಕೊಂಡಿದೆ. ಹಾಗೆಯೇ ಹಿಂಭಾಗದಲ್ಲಿ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದ್ದು ಇದರ ದ್ವಿತೀಯ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಅಲ್ಲದೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 13 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ.