Tecno ಸಂಸ್ಥೆಯು ಹೊಸದಾಗಿ Tecno Spark 50 5G ಮೊಬೈಲ್ ಅನ್ನು ಇಂದು (ಮಾರ್ಚ್ 27 ರಂದು) ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಮೊಬೈಲ್ ಬಜೆಟ್ ಪ್ರೈಸ್‌ಟ್ಯಾಗ್ ಅನ್ನು ಒಳಗೊಂಡಿದೆ. ಅಲ್ಲದೇ ಈ ಹೊಸ ಮೊಬೈಲ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ ಇದಕ್ಕೆ ಪೂರಕವಾಗಿ 45W ಚಾರ್ಜಿಂಗ್ ವ್ಯವಸ್ಥೆ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ ಫ್ಯಾಂಟಸಿ ಪರ್ಪಲ್, ಮಿಂಟ್ ಗ್ರೀನ್, ಇಂಕ್ ಬ್ಲ್ಯಾಕ್ ಮತ್ತು ಷಾಂಪೇನ್ ಗೋಲ್ಡ್ ಕಲರ್ ಆಯ್ಕೆಗಳಲ್ಲಿ ಮಾರುಕಟ್ಟೆ ಪ್ರವೇಶಿಸಿದೆ. ಇದರೊಂದಿಗೆ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಹಾಗಾದರೆ ಟೆಕ್ನೋ ಸ್ಪಾರ್ಕ್ 50 5G ಮೊಬೈಲ್‌ನ ಇತರೆ ಬೆಲೆ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
Also Read : ಅತ್ಯುತ್ತಮ ಕ್ಯಾಮೆರಾ ಇರುವ Google Pixel 9a ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ದೇಶಿಯ ಮೊಬೈಲ್ ಮಾರುಕಟ್ಟೆ ಪ್ರವೇಶಿಸಿರುವ ಟೆಕ್ನೋ ಸ್ಪಾರ್ಕ್ 50 5G ಮೊಬೈಲ್ ಬಜೆಟ್ ಪ್ರೈಸ್‌ಟ್ಯಾಗ್ ಹೊಂದಿದ್ದು ಈ ಮೂಲಕ ಮಾರುಕಟ್ಟೆಯ ಗಮನ ಸೆಳೆದಿದೆ. ಟೆಕ್ನೋ ಸ್ಪಾರ್ಕ್ 50 5G ಮೊಬೈಲ್‌ನ ಆರಂಭಿಕ 4GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 16,999 ರೂ.ಗಳು ಆಗಿದೆ. ಹಾಗೆಯೇ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 18,999ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಫ್ಯಾಂಟಸಿ ಪರ್ಪಲ್, ಮಿಂಟ್ ಗ್ರೀನ್, ಇಂಕ್ ಬ್ಲ್ಯಾಕ್ ಮತ್ತು ಷಾಂಪೇನ್ ಗೋಲ್ಡ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.
ಹೊಸ ಟೆಕ್ನೋ ಸ್ಪಾರ್ಕ್ 50 5G ಮೊಬೈಲ್ 6.78 ಇಂಚಿನ HD+ ಸ್ಕ್ರೀನ್ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಮತ್ತು 560 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ HiOS 16 ಬೆಂಬಲಿತ ಆಂಡ್ರಾಯ್ಡ್ 16 ಓಎಸ್ ಜೊತೆಗೆ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೋ SD ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 2TB ವರೆಗೆ ವಿಸ್ತರಿಸಬಹುದಾದ ಆಯ್ಕೆ ಪಡೆದಿದೆ. ಅಲ್ಲದೇ ಧೂಳು ಮತ್ತು ನೀರಿನ ನಿರೋಧಕಕ್ಕಾಗಿ ಈ ಫೋನ್ IP64 ಪ್ರೊ ರೇಟಿಂಗ್ ಪಡೆದುಕೊಂಡಿದೆ.
ಹಾಗೆಯೇ ಟೆಕ್ನೋ ಸ್ಪಾರ್ಕ್ 50 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಪವರ್‌ನಲ್ಲಿ ಇದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 6500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ.