ಇಂದು Tecno Spark 50 5G ಖರೀದಿಗೆ ಲಭ್ಯ! ಬೆಲೆ ಹಾಗೂ ಫೀಚರ್ಸ್‌ ನೋಡಿ

HIGHLIGHTS

ಇಂದು (ಏಪ್ರಿಲ್‌ 3 ರಂದು) ಟೆಕ್ನೋ ಸ್ಪಾರ್ಕ್‌ 50 5G ಖರೀದಿಗೆ ಲಭ್ಯ

ಟೆಕ್ನೋ ಸ್ಪಾರ್ಕ್‌ 50 5G ಸ್ಮಾರ್ಟ್‌ಫೋನ್‌ ನಾಲ್ಕು ಕಲರ್‌ ಆಯ್ಕೆ ಪಡೆದಿದೆ

ಈ ಹೊಸ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ

ಇಂದು Tecno Spark 50 5G ಖರೀದಿಗೆ ಲಭ್ಯ! ಬೆಲೆ ಹಾಗೂ ಫೀಚರ್ಸ್‌ ನೋಡಿ

Tecno ಕಂಪನಿಯ ಹೊಸ Tecno Spark 50 5G ಸ್ಮಾರ್ಟ್‌ಫೋನ್‌ ಇಂದು (ಏಪ್ರಿಲ್‌ 3 ರಂದು) ಫಸ್ಟ್‌ ಸೇಲ್‌ ಶುರು ಮಾಡಲಿದೆ. ಈ ಸ್ಮಾರ್ಟ್‌ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ಮಾಡಲಿದೆ. ಹಾಗೆಯೇ ಈ ಮೊಬೈಲ್‌ ಡಿಸ್‌ಪ್ಲೇಯು 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇನ್ನು ಈ ಮೊಬೈಲ್‌ ಫ್ಯಾಂಟಸಿ ಪರ್ಪಲ್, ಮಿಂಟ್ ಗ್ರೀನ್, ಇಂಕ್ ಬ್ಲ್ಯಾಕ್ ಮತ್ತು ಷಾಂಪೇನ್ ಗೋಲ್ಡ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಟೆಕ್ನೋ ಸ್ಪಾರ್ಕ್‌ 50 5G ಸ್ಮಾರ್ಟ್‌ಫೋನ್‌ನ ಸೇಲ್‌, ಬೆಲೆ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಬಿಡುಗಡೆಗೆ ಸಿದ್ಧವಾಗಿದೆ OnePlus Nord 6 ಸ್ಮಾರ್ಟ್‌ಫೋನ್! ನಿರೀಕ್ಷಿತ ಬೆಲೆ ಗಮನಿಸಿ

Tecno Spark 50 5G ಮಾರಾಟದ ಡಿಟೇಲ್ಸ್‌

ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಟೆಕ್ನೋ ಸ್ಪಾರ್ಕ್‌ 50 5G ಸ್ಮಾರ್ಟ್‌ಫೋನ್‌ ಮಾರುಕಟ್ಟೆಯ ಗಮನ ಸೆಳೆದಿದೆ. ಈ ಮೊಬೈಲ್‌ನ ಫಸ್ಟ್‌ ಸೇಲ್‌ ಇಂದು (ಏಪ್ರಿಲ್‌ 3 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಅಧಿಕೃತವಾಗಿ ಶುರುವಾಗಲಿದೆ. ಈ ಫೋನಿನ ಆರಂಭಿಕ 4GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 16,999 ರೂ.ಗಳು ಆಗಿದೆ. ಹಾಗೆಯೇ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 18,999ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಫ್ಯಾಂಟಸಿ ಪರ್ಪಲ್, ಮಿಂಟ್ ಗ್ರೀನ್, ಇಂಕ್ ಬ್ಲ್ಯಾಕ್ ಮತ್ತು ಷಾಂಪೇನ್ ಗೋಲ್ಡ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Tecno Spark 50 5G

ಟೆಕ್ನೋ ಸ್ಪಾರ್ಕ್‌ 50 5G ಫೀಚರ್ಸ್‌ ಹೀಗಿವೆ

ಹೊಸ ಟೆಕ್ನೋ ಸ್ಪಾರ್ಕ್‌ 50 5G ಮೊಬೈಲ್‌ 6.78 ಇಂಚಿನ HD+ ಸ್ಕ್ರೀನ್ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್‌ ಮತ್ತು 560 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ HiOS 16 ಬೆಂಬಲಿತ ಆಂಡ್ರಾಯ್ಡ್ 16 ಓಎಸ್‌ ಜೊತೆಗೆ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೋ SD ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 2TB ವರೆಗೆ ವಿಸ್ತರಿಸಬಹುದಾದ ಆಯ್ಕೆ ಪಡೆದಿದೆ. ಅಲ್ಲದೇ ಧೂಳು ಮತ್ತು ನೀರಿನ ನಿರೋಧಕಕ್ಕಾಗಿ ಈ ಫೋನ್‌ IP64 ಪ್ರೊ ರೇಟಿಂಗ್ ಪಡೆದುಕೊಂಡಿದೆ.

ಹಾಗೆಯೇ ಟೆಕ್ನೋ ಸ್ಪಾರ್ಕ್‌ 50 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಪವರ್‌ನಲ್ಲಿ ಇದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ ಜೊತೆಗೆ 45W ಫಾಸ್ಟ್ ಚಾರ್ಜಿಂಗ್‌ ವ್ಯವಸ್ಥೆ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo