vivo S2 FE launched with stunning features under midrange price
ವಿವೋ ಮೊಬೈಲ್ ಸಂಸ್ಥೆಯು ಹೊಸದಾಗಿ Vivo S2 FE ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ MediaTek Dimensity 7300e 5G ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಮೊಬೈಲ್ 120Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 7,200mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಸ್ಟೆಲ್ಲಾರ್ ಗ್ರೀನ್, ಟೈಟಾನ್ ಬ್ಲ್ಯಾಕ್ ಮತ್ತು ಝೆನ್ ವೈಟ್ ಕಲರ್ ಆಯ್ಕೆಯನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಹಾಗಾದರೇ ವಿವೋ S2 FE ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 7,000mAh ಬ್ಯಾಟರಿ ಇರುವ Motorola Edge 70 Fusion ಬೆಲೆಯಲ್ಲಿ ಬೊಂಬಾಟ್ ಇಳಿಕೆ!
ವಿವೋ ಮೊಬೈಲ್ ಸಂಸ್ಥೆಯ ವಿವೋ S2 FE ಮೊಬೈಲ್ ಆಕರ್ಷಕ ಡಿಸೈನ್ ಹಾಗೂ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 38,999 ರೂ.ಗಳು ಆಗಿದೆ. ಹಾಗೆಯೇ 8GB + 128GB ವೇರಿಯಂಟ್ ಬೆಲೆಯು 42,999 ರೂ.ಗಳು ಆಗಿದೆ. ಈ ಫೋನ್ ಸ್ಟೆಲ್ಲಾರ್ ಗ್ರೀನ್, ಟೈಟಾನ್ ಬ್ಲ್ಯಾಕ್ ಮತ್ತು ಝೆನ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಕ್ಟೋಬರ್ 20 ರಿಂದ ಅಮೆಜಾನ್, ಫ್ಲಿಪ್‌ಕಾರ್ಟ್ ಹಾಗೂ ವಿವೋ ವೆಬ್‌ಸೈಟ್ ಮೂಲಕ ಮಾರಾಟಕ್ಕೆ ಬರಲಿದೆ.
ವಿವೋ S2 FE ಮೊಬೈಲ್ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 2000 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ 6nm MediaTek Dimensity 7300e 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 6GB RAM + 128GB ಹಾಗೂ 8GB + 128GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ.
ಹಾಗೆಯೇ ವಿವೋ S2 FE ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯ ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 10,000mAh ಬ್ಯಾಟರಿ ಸಪೋರ್ಟ್ ಜೊತೆಗೆ 44W ವೈರ್ಡ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.