ಮಾರುಕಟ್ಟೆಯ ಗಮನ ಸೆಳೆದಿರುವ Vivo S2 ಮೊಬೈಲ್ ಈಗ ಭಾರೀ ರಿಯಾಯಿತಿಯಲ್ಲಿ ಲಭ್ಯ!
ಫ್ಲಿಪ್ಕಾರ್ಟ್ನಲ್ಲಿ ವಿವೋ S2 ಫೋನಿಗೆ ಬೆಸ್ಟ್ ಆಫರ್
ವಿವೋ S2 ಮೊಬೈಲ್ 7,050mAh ಬ್ಯಾಟರಿ ಪಡೆದಿದೆ
ವಿವೋ S2 ಸ್ಮಾರ್ಟ್ಫೋನ್ ಆಕರ್ಷಕ ಕಲರ್ಗಳಲ್ಲಿ ಲಭ್ಯ

ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ ರಿಯಲ್ಮಿ ಕಂಪನಿಯ Vivo S2 ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 7,050mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ವಿವೋ S2 ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Vivo S2 ಮೊಬೈಲ್ ಈಗ ಆಫರ್ನಲ್ಲಿ ಲಭ್ಯ
ಮೀಡ್ರೇಂಜ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ S2 ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 66,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 42,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು Sapphire Blue, Regal Bronze, ಮತ್ತು Silk White ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ವಿವೋ S2 ಮೊಬೈಲ್ನ ಫೀಚರ್ಸ್ ಹೀಗಿವೆ
ವಿವೋ S2 ಫೋನ್ 6.83 ಇಂಚಿನ ಪೂರ್ಣ 1.5K AMOLED ಡಿಸ್ಪ್ಲೇ ಅನ್ನು ಹೊಂದಿವೆ. ಇದರ ಡಿಸ್ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 3,000 nits ವರೆಗೆ ಗರಿಷ್ಠ ಬ್ರೈಟ್ನೆಸ್ ಸಫೋರ್ಟ್ ಪಡೆದಿದೆ. ಅಲ್ಲದೇ ಡಿಸ್ಪ್ಲೇಯು 1,260 x 2,800 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲಿಸುತ್ತದೆ. ಹಾಗೆಯೇ ಈ ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 8GB RAM + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ವಿವೋ S2 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 7,050mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಸಪೋರ್ಟ್ ಪಡೆದಿದೆ. ಇದು OriginOS 6 ಬೆಂಬಲದೊಂದಿಗೆ ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಒಳಗೊಂಡಿದೆ.
Manthesh B
Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್ಇಂಡಿಯಾ ಸಂಸ್ಥೆಯ ಗಿಜ್ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
View full profile