ಜನಪ್ರಿಯ Vivo S2 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಏರಿಕೆ! ಹೊಸ ಬೆಲೆ ಗಮನಿಸಿ
ವಿವೋ S2 ಸ್ಮಾರ್ಟ್‌ಫೋನ್ ದರದಲ್ಲಿ ಭಾರೀ ಏರಿಕೆ
ವಿವೋ S2 ಟಾಪ್ ಎಂಡ್ ಬೆಲೆಯಲ್ಲಿ 2,000 ರೂ.ಗಳ ಹೆಚ್ಚಳ
ವಿವೋ S2 ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಪ್ರೊಸೆಸರ್ ಒಳಗೊಂಡಿದೆ
ಜನಪ್ರಿಯ ವಿವೋ ಕಂಪನಿಯ S ಸರಣಿಯ ಕೆಲವು ಸ್ಮಾರ್ಟ್‌ಫೋನ್‌ಗಳು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಆದರೆ ಇದೀಗ ವಿವೋ ಸಂಸ್ಥೆಯ Vivo S2 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಏರಿಕೆ ಆಗಿದ್ದು ಖರೀದಿದಾರರು ಅಚ್ಚರಿಪಡುವಂತೆ ಆಗಿದೆ. ವಿವೋ ಕಂಪನಿಯ ಈ ಮೊಬೈಲ್ 8GB + 256GB ಬೆಲೆಯಲ್ಲಿ 2,000 ರೂ.ಗಳ ಪರಿಷ್ಕರಣೆ ಮಾಡಿರುವುದರಿಂದ ಹೊಸ ಫೋನ್ ಖರೀದಿಸುವ ಗ್ರಾಹಕರು ಎರಡು ಬಾರಿ ಯೋಚಿಸುವಂತಾಗಿದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್ 7,050mAh ಬ್ಯಾಟರಿ ಸಪೋರ್ಟ್ ಒಳಗೊಂಡಿದೆ. ಹಾಗಾದರೆ ವಿವೋ S2 ಫೋನಿನ ಹೊಸ ಬೆಲೆ ಹಾಗೂ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : Vi ಟೆಲಿಕಾಂನ ಈ ಅಗ್ಗದ ಪ್ಲಾನ್‌ನಲ್ಲಿ ಅನಿಯಮಿತ ಡೇಟಾ ಜೊತೆಗೆ ಆಕರ್ಷಿಕ ವ್ಯಾಲಿಡಿಟಿ
Vivo S2 ಮೊಬೈಲ್ ಬೆಲೆಯಲ್ಲಿ ಏರಿಕೆ
ಭಾರತದಲ್ಲಿ ವಿವೋ ಕಂಪನಿಯ ವಿವೋ S2 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಏರಿಕೆ ಆಗಿದೆ. ಈ ಮೊಬೈಲ್‌ನ 8GB + 128GB ಸ್ಟೋರೇಜ್ ವೇರಿಯಂಟ್ ಹಳೆಯ ದರ 39,999 ರೂ.ಗಳು ಆಗಿದ್ದರೆ, ಹೊಸ ಬೆಲೆ 42,999 ರೂ.ಗಳು ಆಗಿದೆ. ಇನ್ನು 8GB + 256GB ಸ್ಟೋರೇಜ್ ವೇರಿಯಂಟ್ ಹಳೆಯ ದರ 44,999 ರೂ.ಗಳು ಆಗಿದ್ದರೆ, ಹೊಸ ಪ್ರೈಸ್‌ಟ್ಯಾಗ್ 48,999 ರೂ.ಗಳು ಆಗಿದೆ.

ವಿವೋ S2 ಫೋನಿನ ಫೀಚರ್ಸ್ ಹೀಗಿವೆ
ವಿವೋ S2 ಫೋನ್ 6.83 ಇಂಚಿನ ಪೂರ್ಣ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿವೆ. ಇದರ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 3,000 nits ವರೆಗೆ ಗರಿಷ್ಠ ಬ್ರೈಟ್ನೆಸ್ ಸಫೋರ್ಟ್ ಪಡೆದಿದೆ. ಅಲ್ಲದೇ ಡಿಸ್‌ಪ್ಲೇಯು 1,260 x 2,800 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 8GB RAM + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ವಿವೋ S2 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 7,050mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದೆ. ಇದು OriginOS 6 ಬೆಂಬಲದೊಂದಿಗೆ ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಒಳಗೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
