Vivo S2 launched with stunning design and features
ಪ್ರಮುಖ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾದ ವಿವೋ ಮೊಬೈಲ್ ಕಂಪನಿಯು ಹೊಸದಾಗಿ Vivo S2 ಸ್ಮಾರ್ಟ್‌ಫೋನ್ ಅನ್ನು ಇಂದು (ಆಗಷ್ಟ್ 6 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೀಡ್‌ರೇಂಜ್ ವಿಭಾಗದಲ್ಲಿ ಎಂಟ್ರಿ ಕೊಟ್ಟಿರುವ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಹೊಂದಿದೆ. ಅಲ್ಲದೇ 7,050mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಇದರೊಂದಿಗೆ ಈ ಫೋನ್ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಇನ್ನು ಈ ಫೋನ್ Sapphire Blue, Regal Bronze ಮತ್ತು Silk White ಬಣ್ಣಗಳ ಆಯ್ಕೆಯಲ್ಲಿ ಮಾರುಕಟ್ಟೆ ಪ್ರವೇಶಿಸಿದೆ. ಹಾಗಾದರೇ ವಿವೋ S2 ಮೊಬೈಲ್ ಬೆಲೆ, ಸೇಲ್ ಡೇಟ್ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 8,000mAh ಬ್ಯಾಟರಿ ಒಳಗೊಂಡ OnePlus Nord CE6 ಬೆಲೆಯಲ್ಲಿ ಭರ್ಜರಿ ಇಳಿಕೆ! ಈ ಚಾನ್ಸ್ ಬಿಡಬೇಡಿ
ವಿವೋ ಕಂಪನಿಯ ಹೊಸ ವಿವೋ S2 ಮೊಬೈಲ್ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ನೂತನ ಫೋನಿನ 8GB RAM + 128GB ವೇರಿಯಂಟ್ ಬೆಲೆಯು 39,999 ರೂ.ಗಳು ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆಯು 45,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ Sapphire Blue, Regal Bronze, ಮತ್ತು Silk White ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ವಿವೋ ಇಂಡಿಯಾ ಇ-ಸ್ಟೋರ್, ಫ್ಲಿಪ್‌ಕಾರ್ಟ್ ಮತ್ತು ದೇಶಾದ್ಯಂತ ಆಯ್ದ ಆಫ್‌ಲೈನ್ ರೀಟೇಲ್ ಸ್ಟೋರ್ ಮೂಲಕ ಖರೀದಿಸಬಹುದು.
ವಿವೋ S2 ಫೋನ್ 6.83 ಇಂಚಿನ ಪೂರ್ಣ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿವೆ. ಇದರ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 3,000 nits ವರೆಗೆ ಗರಿಷ್ಠ ಬ್ರೈಟ್ನೆಸ್ ಸಫೋರ್ಟ್ ಪಡೆದಿದೆ. ಅಲ್ಲದೇ ಡಿಸ್‌ಪ್ಲೇಯು 1,260 x 2,800 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 8GB RAM + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ವಿವೋ S2 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 7,050mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದೆ. ಇದು OriginOS 6 ಬೆಂಬಲದೊಂದಿಗೆ ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಒಳಗೊಂಡಿದೆ.