32MP ಸೆಲ್ಫಿ ಕ್ಯಾಮೆರಾ ಒಳಗೊಂಡ Vivo S2 ಮೊಬೈಲ್ ಖರೀದಿಸಲು ಈ ಆಫರ್ ಅತ್ಯುತ್ತಮ!
ಅಮೆಜಾನ್ ಸೇಲ್‌ನಲ್ಲಿ ವಿವೋ S2 ಫೋನಿಗೆ ಬೆಸ್ಟ್ ಆಫರ್
ವಿವೋ S2 ಮೊಬೈಲ್ 7,050mAh ಬ್ಯಾಟರಿ ಬೆಂಬಲ ಪಡೆದಿದೆ
ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7360 ಟರ್ಬೊ ಪ್ರೊಸೆಸರ್ ಹೊಂದಿದೆ
ಇ ಕಾಮರ್ಸ್ ದೈತ್ಯ ಎನಿಸಿರುವ ಅಮೆಜಾನ್‌ನ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಕಂಪನಿಯ Vivo S2 ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 7,050mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ S2 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 7,000mAh ಬ್ಯಾಟರಿ ಸೌಲಭ್ಯದ Motorola g37 Power ಮೊಬೈಲ್ ಈಗ ಆಫರ್ ಬೆಲೆಯಲ್ಲಿ ಲಭ್ಯ!
Vivo S2 ಫೋನಿಗೆ ಭರ್ಜರಿ ಆಫರ್
ಮೀಡ್‌ರೇಂಜ್ ದರ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯ ಗಮನ ಸೆಳೆದಿರುವ ವಿವೋ S2 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 66,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 42,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು Sapphire Blue, Regal Bronze, ಮತ್ತು Silk White ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ವಿವೋ S2 ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ವಿವೋ S2 ಫೋನಿನ ಫೀಚರ್ಸ್ ಹೀಗಿವೆ
ವಿವೋ S2 ಸ್ಮಾರ್ಟ್‌ಫೋನ್ 6.83 ಇಂಚಿನ ಪೂರ್ಣ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿವೆ. ಇದರ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 3,000 nits ವರೆಗೆ ಗರಿಷ್ಠ ಬ್ರೈಟ್ನೆಸ್ ಸಫೋರ್ಟ್ ಪಡೆದಿದೆ. ಅಲ್ಲದೇ ಡಿಸ್‌ಪ್ಲೇಯು 1,260 x 2,800 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 8GB RAM + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ವಿವೋ S2 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 7,050mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದೆ. ಇದು OriginOS 6 ಬೆಂಬಲದೊಂದಿಗೆ ಆಂಡ್ರಾಯ್ಡ್ 16 ಓಎಸ್ ಸಪೋರ್ಟ್ ಒಳಗೊಂಡಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
