ಮಾರುಕಟ್ಟೆಯಲ್ಲಿ ಅಬ್ಬರಿಸಲು ಬರ್ತಿದೆ Vivo S2 ಮೊಬೈಲ್‌! 7,000mAh ಸಾಮರ್ಥ್ಯದ ಬ್ಯಾಟರಿ

HIGHLIGHTS

ಶೀಘ್ರದಲ್ಲೇ ಭಾರತದಲ್ಲಿ ವಿವೋ S2 ಸ್ಮಾರ್ಟ್‌ಫೋನ್‌ ಬಿಡುಗಡೆ

ವಿವೋ S2 ಸ್ಮಾರ್ಟ್‌ಫೋನ್‌ ಸಿಲ್ಕ್ ವೈಟ್‌ ಕಲರ್‌ ಆಯ್ಕೆ ಬರಲಿದೆ

ವಿವೋ S2 ಮೊಬೈಲ್‌ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಲಗ್ಗೆ ಇಡಲಿದೆ

ಮಾರುಕಟ್ಟೆಯಲ್ಲಿ ಅಬ್ಬರಿಸಲು ಬರ್ತಿದೆ Vivo S2 ಮೊಬೈಲ್‌! 7,000mAh ಸಾಮರ್ಥ್ಯದ ಬ್ಯಾಟರಿ

ವಿವೋ ಸಂಸ್ಥೆಯು ಹೊಸದಾಗಿ Vivo S2 ಮೊಬೈಲ್‌ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗುತ್ತಿದೆ. ವಿವೋ ಸಂಸ್ಥೆಯ ನೂತನ ವಿವೋ S2 ಮೊಬೈಲ್‌ ಶೀಘ್ರದಲ್ಲೇ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್‌ ಲಾಂಚ್‌ ಕುರಿತಾಗಿ ಈಗಾಗಲೇ ಅಮೆಜಾನ್‌ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಲೈವ್ ಮಾಡಲಾಗಿದೆ. ಹಾಗೆಯೇ ವಿವೋ S2 ಮೊಬೈಲ್‌ನ ವಿನ್ಯಾಸ ಮತ್ತು ಕಲರ್‌ ಆಯ್ಕೆಗಳನ್ನು ಸಹ ಬಹಿರಂಗಪಡಿಸಿದೆ. ಈ ಫೋನಿನ ಟೀಸರ್‌ನಲ್ಲಿ ಮಾತ್ರೆ ಆಕಾರದ ಕ್ಯಾಮೆರಾ ಮಾಡ್ಯೂಲ್ ಮತ್ತು ಎರಡು ದೊಡ್ಡ ಕ್ಯಾಮೆರಾ ರಿಂಗ್‌ಗಳು ಹಾಗೂ LED ಫ್ಲ್ಯಾಶ್ ಕಾಣಿಸಿಕೊಳ್ಳುತ್ತವೆ. ಅಲ್ಲದೇ ಪ್ರೀಮಿಯಂ ಲುಕ್‌ ಅನ್ನು ಒಳಗೊಂಡಂತೆ ಕಾಣುವ ಈ ಫೋನ್‌ ಸಿಲ್ಕ್ ವೈಟ್‌ ಕಲರ್‌ ಆಯ್ಕೆಯಲ್ಲಿ ಬರುವ ನಿರೀಕ್ಷೆಗಳು ಇವೆ. ಹಾಗಾದರೇ ವಿವೋ S2 ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್‌ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.

Digit.in Survey
✅ Thank you for completing the survey!

Also Read : 50MP ಕ್ಯಾಮೆರಾ ಇರುವ Oppo F33 5G ಮೊಬೈಲ್‌ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

ಶೀಘ್ರದಲ್ಲೇ Vivo S2 ಫೋನ್‌ ಬಿಡುಗಡೆ

ಮಾರುಕಟ್ಟೆಗೆ ಹೊಸದಾಗಿ ಎಂಟ್ರಿ ಕೊಡಲಿರುವ ವಿವೋ S2 ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಅನ್ನು ಇನ್ನೂ ಬಹಿರಂಗಪಡಿಸಿಲ್ಲ. ಆದರೆ ಈ ಫೋನ್‌ ಇದೇ ಆಗಷ್ಟ್‌ 6 ರಂದು ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಈ ಮೊಬೈಲ್‌ ಲಾಂಚ್‌ ಕುರಿತಾಗಿ ಈಗಾಗಲೇ ಅಮೆಜಾನ್‌ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಲೈವ್ ಮಾಡಲಾಗಿದೆ. ಇನ್ನು ಈ ಫೋನ್‌ 8GB + 128GB ಮತ್ತು 8GB + 256GB ಸ್ಟೋರೇಜ್ ವೇರಿಯಂಟ್‌ಗಳಲ್ಲಿ ಲಭ್ಯವಾಗಬಹುದು ಎನ್ನಲಾಗಿದೆ. ಇನ್ನು ಈ ಫೋನ್‌ 43,000 ರೂ.ಗಳ ಆರಂಭಿಕ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿರಬಹುದು ಎಂದು ಸೂಚಿಸುತ್ತವೆ.

Vivo S2 launch Tamil
Vivo S2 launch

ವಿವೋ S2 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಮುಂಬರುವ ಹೊಸ ವಿವೋ S2 ಮೊಬೈಲ್ 6.59 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್‌ ಜೊತೆಗೆ ಜೊತೆಗೆ ಕರ್ವ್ಡ್‌ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ ಎನ್ನಲಾಗಿದೆ. ಕಾರ್ಯಕ್ಷಮತೆಗಾಗಿ ಈ ಫೋನ್‌ನಲ್ಲಿ ಮೀಡಿಯಾ ಟೆಕ್‌ ಡೈಮೆನ್ಸಿಟಿ 7360 ಚಿಪ್‌ಸೆಟ್ ಪ್ರೊಸೆಸರ್ ಪವರ್‌ ಇರಬಹುದು. ಇದಕ್ಕೆ ಪೂರಕವಾಗಿ 8GB RAM ಮತ್ತು 256GB ವರೆಗೆ ಆಂತರಿಕ ಸಂಗ್ರಹಣೆ ದೊರೆಯುವ ಸಾಧ್ಯತೆ ಇದೆ.

ಇನ್ನು ವಿವೋ S2 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿರುವ ನಿರೀಕ್ಷೆಗಳು ಇವೆ. ಇನ್ನು ಇದರ ಬ್ಯಾಟರಿ ವಿಭಾಗವೂ ಈ ಫೋನ್‌ನ ಪ್ರಮುಖ ಆಕರ್ಷಣೆಯಾಗಿದ್ದು, 7,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ ನೀಡಲಾಗಬಹುದು ಎಂಬ ಮಾಹಿತಿ ಹೊರಬಿದ್ದಿದೆ. ಈ ಬ್ಯಾಟರಿ ದೀರ್ಘಕಾಲದ ಬಳಕೆಯನ್ನು ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile