ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Vivo T4 5G ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ!

HIGHLIGHTS

ಜನಪ್ರಿಯ ವಿವೋ T4 5G ಮೊಬೈಲ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ

ಈ ಸ್ಮಾರ್ಟ್‌ಫೋನ್‌ 7300mAh ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ

ವಿವೋ T4 5G ಫೋನ್ Snapdragon 7s Gen 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ

ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Vivo T4 5G ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ!

ದೇಶೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ವಿವೋ ಕಂಪನಿಯ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಇದೆ. ಅವುಗಳ ಪೈಕಿ ಬಜೆಟ್‌ ದರದಲ್ಲಿನ ಮೊಬೈಲ್‌ಗಳು ಗಮನ ಸೆಳೆದಿವೆ. ಸದ್ಯ ಆ ಪೈಕಿ ಕಂಪನಿಯ Vivo T4 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಕ್ವಾಲ್ಕಮ್ Snapdragon 7s Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ ಎಮರಾಲ್ಡ್ ಬ್ಲೇಜ್ ಮತ್ತು ಗ್ರೇ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T4 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ನಾಳೆ ಭಾರತದಲ್ಲಿ Moto G37 ಮೊಬೈಲ್‌ ಸರಣಿ ಬಿಡುಗಡೆ! ನಿರೀಕ್ಷಿತ ಫೀಚರ್ಸ್‌ ನೋಡಿ

Vivo T4 5G ಮೊಬೈಲ್‌ಗೆ ಬಿಗ್ ಡಿಸ್ಕೌಂಟ್‌

ವಿವೋ T4 5G ಮೊಬೈಲ್‌ ಕಡಿಮೆ ಬೆಲೆಯಲ್ಲಿ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 27,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 26,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ ಎಮರಾಲ್ಡ್ ಬ್ಲೇಜ್ ಮತ್ತು ಗ್ರೇ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮೂಲಕ ಖರೀದಿಸಬಹುದಾಗಿದೆ.

Vivo T4 5G

ವಿವೋ T4 5G ಫೋನ್‌ ಫೀಚರ್ಸ್‌ ಹೀಗಿವೆ

ವಿವೋ ಕಂಪನಿಯ ವಿವೋ T4 5G ಮೊಬೈಲ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.67 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್‌ 2392 × 1080 ಪಿಕ್ಸೆಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ ಈ ನೂತನ ಫೋನ್‌ ಕ್ವಾಲ್ಕಮ್ Snapdragon 7s Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು ಇದಕ್ಕೆ ಪೂರಕವಾಗಿ 8GB RAM + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ.

ಇನ್ನು ವಿವೋ T4 5G ಮೊಬೈಲ್‌ 90W ವೈರ್ಡ್ ಚಾರ್ಜಿಂಗ್ ಬೆಂಬಲಿತ ಜೊತೆಗೆ 7300mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ ಹಾಗೂ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅದೇ ರೀತಿ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾವನ್ನು ನೀಡಲಾಗಿದೆ. ಇದರ ಜೊತೆಗೆ ಈ ಮೊಬೈಲ್‌ ಧೂಳು ಮತ್ತು ಸ್ಪ್ಲಾಶ್ ನಿರೋಧಕಕ್ಕಾಗಿ IP65 ರೇಟಿಂಗ್ ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile