ಭಾರತದಲ್ಲಿ ವಿವೋ ಕಂಪನಿಯ ಜಬರ್ದಸ್ತ್ ಮತ್ತು ಅತಿದೊಡ್ಡ ಬ್ಯಾಟರಿ ಹೊಂದಿರುವ ಲೇಟೆಸ್ಟ್ Vivo T4 5G ಅಮೆಜಾನ್ ಮೂಲಕ ಭಾರಿ ಡಿಸ್ಕೌಂಟ್ ಬೆಲೆಯೊಂದಿಗೆ ಮಾರಾಟಕ್ಕೆ ಲಭ್ಯವಿದೆ. ವಿಶೇಷ ಅಂದ್ರೆ Vivo T4 5G ಸ್ಮಾರ್ಟ್ಫೋನ್ ಆರಂಭಿಕ 8GB RAM + 128GB ಸ್ಟೋರೇಜ್ ಮಾದರಿ ₹21,499 ರೂಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಆಸಕ್ತ ಬಳಕೆದಾದರರು ಬ್ಯಾಂಕ್ ಆಫರ್ ಮತ್ತು ವಿನಿಮಯ ಬೋನಸ್ ಜೊತೆಗೆ ಕಡಿಮೆ ಬೆಲೆಗೆ ಈ 7300mAh ಬ್ಯಾಟರಿ ಮತ್ತು ಇಂಟ್ರೆಸ್ಟಿಂಗ್ ಫೀಚರ್ಗಳೊಂದಿಗೆ ಬರುತ್ತದೆ.
ಭಾರತದಲ್ಲಿ Vivo T4 5G ಸ್ಮಾರ್ಟ್ಫೋನ್ ಪ್ರಸ್ತುತ ಎರಡು ಮಾದರಿಯಲ್ಲಿ ಬಿಡುಗಡೆಯಾಗಿದ್ದು ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ಆರಂಭಿಕ 21,999 ರೂಗಳಿಗೆ ಮತ್ತೊಂದು 8GB RAM ಮತ್ತು 256GB ಸ್ಟೋರೇಜ್ ಮಾದರಿಗೆ 23,999 ರೂಗಳಿಗೆ ಮತ್ತು ಕೊಂದೆಯದಾಗಿ ಇದರ 12GB RAM ಮತ್ತು 256GB ಸ್ಟೋರೇಜ್ ಮಾದರಿಗೆ 25,999 ರೂಗಳಿಗೆ ಪರಿಚಯಿಸಲಾಗಿದೆ.
ಇದನ್ನೂ ಓದಿ: ಸ್ಯಾಮ್‌ಸಂಗ್‌ನ Galaxy A35 5G ಅತಿ ಕಡಿಮೆ ಬೆಲೆಗೆ ಮಾರಾಟ! ಆಫರ್ ಬೆಲೆ ಮತ್ತು ಫೀಚರ್ಗಳೇನು ತಿಳಿಯಿರಿ!
ಆದರೆ ಆಸಕ್ತ ಬಳಕೆದಾರರು ಇದನ್ನು HDFC ಮತ್ತು SBI ಬ್ಯಾಂಕ್ಗಳ ಕಾರ್ಡ್ ಬಳಸಿ ಸುಮಾರು 2000 ರೂಗಳ ಹೆಚ್ಚುವರಿ ಡಿಸ್ಕೌಂಟ್ ಪಡೆಯುವ ಮೂಲಕ ಈ Vivo T4 5G ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಕೇವಲ 19,999 ರೂಗಳಿಗೆ ಅಮೆಜಾನ್ನಿಂದ ಖರೀದಿಸಬಹುದು.
ಅಲ್ಲದೆ Vivo T4 5G ಸ್ಮಾರ್ಟ್ಫೋನ್ ಮೇಲೆ ಅಮೆಜಾನ್ ನಿಮಗೆ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ Vivo T4 5G ಸ್ಮಾರ್ಟ್‌ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 20,400 ರೂಗಳ ವರೆಗೆ ಡಿಸ್ಕೌಂಟ್ ನಿರೀಕ್ಷಿಸಬಹುದು. ಆದರೆ ಈ ಡೀಲ್ ಬೆಲೆ ನಿಮ್ಮ ಹಳೆ ಫೋನಿನ ಸ್ಥಿತಿಯ ಮೇಲೆ ನಿರ್ಧರಿಸಲಾಗುತ್ತದೆ ಎಂಬುದನ್ನು ನೀವು ನೆನಪಿನಲ್ಲಿಡಿ.
Vivo T4 5G ಸ್ಮಾರ್ಟ್ಫೋನ್ 120Hz ರಿಫ್ರೆಶ್ ರೇಟ್ನೊಂದಿಗೆ 6.67 ಇಂಚಿನ AMOLED (2392×1080 ಪಿಕ್ಸೆಲ್‌ಗಳು) FHD ಅನ್ನು ಹೊಂದಿದೆ. ಫೋಟೋಗಳು ಮತ್ತು ವೀಡಿಯೊಗಳಿಗಾಗಿ Vivo T4 5G ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು f/1.8 ಅಪಾರ್ಚರ್‌ನೊಂದಿಗೆ 50MP ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾವನ್ನು OIS ಜೊತೆಗೆ ಬರುತ್ತದೆ. ಮತ್ತೊಂದು 2MP ಡೆಪ್ತ್ ಸೆನ್ಸರ್ ಹೊಂದಿದೆ. ಇದರ ಕ್ರಮವಾಗಿ ಫೋನ್ ಮುಂಭಾಗದಲ್ಲಿ ಸೇಲ್ಫಿ ಮತ್ತು ವಿಡಿಯೋ ಕರೆಗಾಗಿ 32MP ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಇದನ್ನೂ ಓದಿ: Motorola razr 60 Ultra ಮೊದಲ ಮಾರಾಟದಲ್ಲಿ ಬರೋಬ್ಬರಿ ₹10,500 ರೂಗಳ ಡಿಸ್ಕೌಂಟ್‍ನೊಂದಿಗೆ ಲಭ್ಯವಿದೆ!
ಅಲ್ಲದೆ ಸ್ಮಾರ್ಟ್ಫೋನ್ ವಾಟರ್ ಮತ್ತು ಡಸ್ಟ್ ಪ್ರೊಟೆಕ್ಷನ್‌ಗಾಗಿ IP65 ರೇಟಿಂಗ್ ಅನ್ನು ಸಹ ಈ ಫೋನ್ ಹೊಂದಿದೆ. Vivo T4 5G ಸ್ಮಾರ್ಟ್ಫೋನ್ Qualcomm Snapdragon 7s Gen 3 ಪ್ರೊಸೆಸರ್‌ನೊಂದಿಗೆ ಬರುತ್ತದೆ. Vivo T4 5G ಸ್ಮಾರ್ಟ್ಫೋನ್ ಆರಂಭಿಕ 8GB RAM ಆನ್‌ಬೋರ್ಡ್ ಮೆಮೊರಿ ಮತ್ತು 128GB ಸ್ಟೋರೇಜ್ ಹೊಂದಿದೆ.
ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Port ಮತ್ತು AGPS/GPS, GLONASS, BDS, ಮತ್ತು In-display Fingerprint ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ ಈ ಸ್ಮಾರ್ಟ್ಫೋನ್ 7300mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 90W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.