ಜನಪ್ರಿಯ Vivo T4 Lite 5G ಮೊಬೈಲ್ ದರದಲ್ಲಿ ಭಾರೀ ಇಳಿಕೆ; ಈ ಆಫರ್ ಬಿಡಬೇಡಿ
ಫ್ಲಿಪ್‌ಕಾರ್ಟ್‌ನಲ್ಲಿ ವಿವೋ T4 ಲೈಟ್ 5G ಫೋನಿಗೆ ಬಿಗ್ ಡಿಸ್ಕೌಂಟ್
ವಿವೋ T4 ಲೈಟ್ 5G ಮೊಬೈಲ್ 6,000mAh ಬ್ಯಾಟರಿ ಸಪೋರ್ಟ್ ಪಡೆದಿದೆ
ವಿವೋ T4 ಲೈಟ್ 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ
ವಿವೋ ಕಂಪನಿಯ Vivo T4 Lite 5G ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಟೈಟಾನಿಯಂ ಗೋಲ್ಡ್ ಹಾಗೂ ಪ್ರಿಸ್ಮ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ T4 ಲೈಟ್ 5G ಮೊಬೈಲ್‌ಗೆ ಲಭ್ಯವಿರುವ ಆಫರ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vi ಟೆಲಿಕಾಂನ ಈ ಅಗ್ಗದ ಪ್ಲಾನ್‌ನಲ್ಲಿ ಅನಿಯಮಿತ ಡೇಟಾ ಜೊತೆಗೆ ಆಕರ್ಷಿಕ ವ್ಯಾಲಿಡಿಟಿ
Vivo T4 Lite 5G ಬೆಲೆಯಲ್ಲಿ ಬಿಗ್ ಆಫರ್
ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ವಿವೋ T4 ಲೈಟ್ 5G ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 27,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 16,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಟೈಟಾನಿಯಂ ಗೋಲ್ಡ್ ಹಾಗೂ ಪ್ರಿಸ್ಮ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ವಿವೋ T4 ಲೈಟ್ 5G ಮೊಬೈಲ್ ಫೀಚರ್ಸ್
ವಿವೋ T4 ಲೈಟ್ 5G ಮೊಬೈಲ್ 90Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 1080×2392 ಪಿಕ್ಸಲ್ ರೆಸಲ್ಯೂಶನ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 4GB + 64GB, 4GB + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. ಇದು ಧೂಳು ಮತ್ತು ನೀರು ನಿರೋಧಕ IP64 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಇನ್ನು ವಿವೋ T4 ಲೈಟ್ 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಹೊಂದಿರುವ ಜೊತೆಗೆ 2MP ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 5MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 15W ಚಾರ್ಜಿಂಗ್ ಸೌಲಭ್ಯ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
