ವಿವೋ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! Vivo T4 Lite 5G ಬೆಲೆಯಲ್ಲಿ ಭರ್ಜರಿ ಇಳಿಕೆ

HIGHLIGHTS

ವಿವೋ T4 ಲೈಟ್‌ 5G ಮೊಬೈಲ್‌ ಬೆಲೆಯಲ್ಲಿ ಈಗ ಆಕರ್ಷಕ ಇಳಿಕೆ

ಈ ಫೋನ್ ಟೈಟಾನಿಯಂ ಗೋಲ್ಡ್‌ ಹಾಗೂ ಪ್ರಿಸ್ಮ್ ಬ್ಲೂ ಕಲರ್‌ ಆಯ್ಕೆ ಹೊಂದಿದೆ

ವಿವೋದ ಈ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ

ವಿವೋ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! Vivo T4 Lite 5G ಬೆಲೆಯಲ್ಲಿ ಭರ್ಜರಿ ಇಳಿಕೆ

ದೇಶೀಯ ಮಾರುಕಟ್ಟೆಯಲ್ಲಿ ವಿವೋ ಫೋನ್‌ಗಳಿಗೆ ಡಿಮ್ಯಾಂಡ್‌ ಇದೆ. ಅವುಗಳ ಪೈಕಿ Vivo T4 Lite 5G ಸ್ಮಾರ್ಟ್‌ಫೋನ್‌ ಕಡಿಮೆ ಬೆಲೆಯಲ್ಲಿ ಗ್ರಾಹಕರನ್ನು ಸೆಳೆದಿದೆ. ಸದ್ಯ ಈ ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡು ಮತ್ತೆ ಗ್ರಾಹಕರನ್ನು ಆಕರ್ಷಿಸಿದೆ. ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಫೋನ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಇನ್ನು ಈ ಮೊಬೈಲ್‌ ಟೈಟಾನಿಯಂ ಗೋಲ್ಡ್‌ ಹಾಗೂ ಪ್ರಿಸ್ಮ್ ಬ್ಲೂ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T4 ಲೈಟ್‌ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 12GB RAM ಇರುವ OnePlus 13 ಈಗ ಮತ್ತಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ! ಸಖತ್ ಆಫರ್‌

Vivo T4 Lite 5G ದರದಲ್ಲಿ ಆಕರ್ಷಕ ಕಡಿತ

ಅಗ್ಗದ ದರದಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ವಿವೋ T4 ಲೈಟ್‌ 5G ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಡಿಸ್ಕೌಂಟ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 13,999 ರೂ.ಗಳು ಆಗಿದ್ದು ಆದರೆ ಬ್ಯಾಂಕ್ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 13,299 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಮೊಬೈಲ್‌ ಟೈಟಾನಿಯಂ ಗೋಲ್ಡ್‌ ಹಾಗೂ ಪ್ರಿಸ್ಮ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Vivo T4 Lite 5G

ವಿವೋ T4 ಲೈಟ್‌ 5G ಮೊಬೈಲ್‌ ಫೀಚರ್ಸ್‌

ವಿವೋ T4 ಲೈಟ್‌ 5G ಫೋನ್‌ 90Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 1080×2392 ಪಿಕ್ಸಲ್‌ ರೆಸಲ್ಯೂಶನ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 4GB + 64GB, 4GB + 128GB ಹಾಗೂ 8GB + 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ. ಇದು ಧೂಳು ಮತ್ತು ನೀರು ನಿರೋಧಕ IP64 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.

ಇನ್ನು ವಿವೋ T4 ಲೈಟ್‌ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್‌ ಹೊಂದಿರುವ ಜೊತೆಗೆ 2MP ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 5MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 15W ಚಾರ್ಜಿಂಗ್ ಸೌಲಭ್ಯ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile