Digit.in
Digit.in

    6,000mAh ಬ್ಯಾಟರಿ ಇರುವ Vivo ಕಂಪನಿಯ ಈ ಫೋನ್‌ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

    Highlights

    ಫ್ಲಿಪ್‌ಕಾರ್ಟ್‌ನಲ್ಲಿ ವಿವೋ T4 ಲೈಟ್‌ ಮೊಬೈಲ್‌ಗೆ ಬಿಗ್ ಆಫರ್‌

    ವಿವೋ T4 ಲೈಟ್‌ ಮೊಬೈಲ್‌ 6,000mAh ಬ್ಯಾಟರಿ ಸೌಲಭ್ಯ ಪಡೆದಿದೆ

    ವಿವೋ T4 ಲೈಟ್‌ ಸ್ಮಾರ್ಟ್‌ಫೋನ್‌ ಎರಡು ಆಕರ್ಷಕ ಕಲರ್‌ಗಳಲ್ಲಿ ಲಭ್ಯ

    6,000mAh ಬ್ಯಾಟರಿ ಇರುವ Vivo ಕಂಪನಿಯ ಈ ಫೋನ್‌ ಬೆಲೆಯಲ್ಲಿ ಬೊಂಬಾಟ್‌ ಇಳಿಕೆ!

    Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ Vivo ಕಂಪನಿಯ Vivo T4 Lite 5G ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T4 ಲೈಟ್‌ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

    Vivo T4 Lite 5G ಫೋನ್‌ ಬೆಲೆಯಲ್ಲಿ ಇಳಿಕೆ

    ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ T4 ಲೈಟ್‌ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 28,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 18,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಟೈಟಾನಿಯಂ ಗೋಲ್ಡ್‌ ಹಾಗೂ ಪ್ರಿಸ್ಮ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

    Vivo T4 Lite 5G

    ವಿವೋ T4 ಲೈಟ್‌ 5G ಮೊಬೈಲ್‌ ಫೀಚರ್ಸ್‌

    ವಿವೋ T4 ಲೈಟ್‌ 5G ಮೊಬೈಲ್‌ 90Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 1080×2392 ಪಿಕ್ಸಲ್‌ ರೆಸಲ್ಯೂಶನ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 4GB + 64GB, 4GB + 128GB ಹಾಗೂ 8GB + 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ. ಇದು ಧೂಳು ಮತ್ತು ನೀರು ನಿರೋಧಕ IP64 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.

    ಹಾಗೆಯೇ ವಿವೋ T4 ಲೈಟ್‌ 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್‌ ಹೊಂದಿರುವ ಜೊತೆಗೆ 2MP ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 5MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 15W ಚಾರ್ಜಿಂಗ್ ಸೌಲಭ್ಯ ಪಡೆದಿದೆ.

    Manthesh B

    Manthesh B

    Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

    View full profile