ಕಡಿಮೆ ಬೆಲೆಯಲ್ಲಿ ಒಂದೊಳ್ಳೆ ಸ್ಮಾರ್ಟ್‌ಫೋನ್ ಖರೀದಿಸುವ ಪ್ಲಾನ್ ಮಾಡಿದ್ದರೆ ಇಲ್ಲಿ ಗಮನಿಸಿ. ಜನಪ್ರಿಯ ಇ ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಇದೀಗ Vivo T4 Lite 5G ಸ್ಮಾರ್ಟ್‌ಫೋನ್ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ವಿವೋ T4 ಲೈಟ್ 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ ಹಾಗೂ 6000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದೆ. ಇದರೊಂದಿಗೆ 50MP ಕ್ಯಾಮೆರಾ ಸಪೋರ್ಟ್ ಸಹ ಒಳಗೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ವಿವೋ T4 ಲೈಟ್ 5G ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
Also Read : ಇಂದಿನಿಂದ Xiaomi 17 Ultra ಸೇಲ್ ಪ್ರಾರಂಭ! 200MP ಕ್ಯಾಮೆರಾ, ವೇಗದ ಪ್ರೊಸೆಸರ್
ತನ್ನ ವರ್ಗದಲ್ಲೇ ಟ್ರೆಂಡಿಂಗ್‌ನಲ್ಲಿ ಇರುವ ವಿವೋ T4 ಲೈಟ್ 5G ಮೊಬೈಲ್ ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಬಿಗ್ ರಿಯಾಯಿತಿ ಹೊಂದಿದೆ. ಈ ಸ್ಮಾರ್ಟ್‌ಫೋನ್ 4GB + 128GB ವೇರಿಯಂಟ್ ಬೆಲೆ 13,999 ರೂಗಳು ಪ್ರೈಸ್‌ಟ್ಯಾಗ್ ಹೊಂದಿದೆ. ಆದರೆ ಬ್ಯಾಂಕ್ ಆಫರ್ ಪಡೆದುಕೊಂಡರೆ ಈ ಮೊಬೈಲ್ 13,299 ರೂಗಳ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಟೈಟಾನಿಯಂ ಗೋಲ್ಡ್ ಹಾಗೂ ಪ್ರಿಸ್ಮ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ವಿವೋ T4 ಲೈಟ್ 5G ಮೊಬೈಲ್ 90Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 1080×2392 ಪಿಕ್ಸಲ್ ರೆಸಲ್ಯೂಶನ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 4GB + 64GB, 4GB + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. ಇದು ಧೂಳು ಮತ್ತು ನೀರು ನಿರೋಧಕ IP64 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಇನ್ನು ವಿವೋ T4 ಲೈಟ್ 5G ಮೊಬೈಲ್ ಅತ್ಯುತ್ತಮ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹೊಂದಿರುವ ಜೊತೆಗೆ 2MP ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 5MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ 6000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 15W ಚಾರ್ಜಿಂಗ್ ಸೌಲಭ್ಯ ಪಡೆದಿದೆ.