ಗ್ರಾಹಕರಿಗೆ ಸಿಹಿಸುದ್ದಿ! Vivo T4 Ultra ಮೊಬೈಲ್‌ ಈಗ ಭರ್ಜರಿ ಆಫರ್‌ ಬೆಲೆಯಲ್ಲಿ ಲಭ್ಯ

HIGHLIGHTS

ವಿವೋ T4 ಅಲ್ಟ್ರಾ ಮೊಬೈಲ್‌ ಬೆಲೆಯಲ್ಲಿ ಗಮನಾರ್ಹ ಇಳಿಕೆ

ಈ ಸ್ಮಾರ್ಟ್‌ಫೋನ್‌ 5,500mAh ಬ್ಯಾಟರಿ ಬೆಂಬಲ ಹೊಂದಿದೆ

ಈ ಮೊಬೈಲ್‌ MediaTek Dimensity 9300+ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ

ಪ್ರಸ್ತುತ ಭರ್ಜರಿ ಆಫರ್‌ನಲ್ಲಿ ವಿವೋ ಕಂಪನಿಯ ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವ ಪ್ಲಾನ್‌ ಮಾದಿದ್ದರೆ, ಇಲ್ಲಿದೆ ನಿಮಗೆ ಗುಡ್‌ನ್ಯೂಸ್‌. ವಿವೋ ಕಂಪನಿಯ Vivo T4 Ultra ಮೊಬೈಲ್‌ ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ನ SASA LELE ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ MediaTek Dimensity 9300+ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ ಗ್ರೇ ಮತ್ತು ಗೋಲ್ಡ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T4 ಅಲ್ಟ್ರಾ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Realme NARZO 80 Pro 5G ಫೋನ್‌ಗೆ ಭಾರೀ ಡಿಸ್ಕೌಂಟ್‌! ಈಗ ಕಡಿಮೆ ಬೆಲೆಯಲ್ಲಿ ಲಭ್ಯ

Vivo T4 Ultra ದರದಲ್ಲಿ ಭಾರೀ ಇಳಿಕೆ

ವಿವೋ T4 ಅಲ್ಟ್ರಾ 5G ಮೊಬೈಲ್‌ ಬಜೆಟ್‌ ಬೆಲೆಯಲ್ಲಿ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನ ಗ್ರೇಟ್‌ ಸಮ್ಮರ್ ಸೇಲ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 16,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 14,499 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್‌ ಗ್ರೇ ಮತ್ತು ಗೋಲ್ಡ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಮೂಲಕ ಖರೀದಿಸಬಹುದಾಗಿದೆ.

ವಿವೋ T4 ಅಲ್ಟ್ರಾ 5G ಮೊಬೈಲ್‌ ಫೀಚರ್ಸ್‌

ವಿವೋ T4 ಅಲ್ಟ್ರಾ 5G ಮೊಬೈಲ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.67 ಇಂಚಿನ AMOLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ MediaTek Dimensity 9300+ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್‌ 15 ಆಧಾರಿತ ಫನ್‌ಟಚ್‌ OS 15 ಸಪೋರ್ಟ್‌ ಸಹ ಹೊಂದಿದೆ. ಹಾಗೆಯೇ ಇದು 12GB ವರೆಗೆ RAM ಮತ್ತು 512GB ಸ್ಟೋರೇಜ್‌ ಆಯ್ಕೆಗಳನ್ನು ಒಳಗೊಂಡಿದೆ.

ಅದೇ ರೀತಿ ವಿವೋ T4 ಅಲ್ಟ್ರಾ 5G ಮೊಬೈಲ್‌ ಅತ್ಯುತ್ತಮ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಈ ಫೋನ್ 50MP OIS ಮುಖ್ಯ ಕ್ಯಾಮೆರಾ ಸೆನ್ಸಾರ್‌ ಒಳಗೊಂಡಿರುವ ಜೊತೆಗೆ 50MP ಸೋನಿ IMX 882 ಪೆರಿಸ್ಕೋಪ್ ಮತ್ತು 8MP ಅಲ್ಟ್ರಾವೈಡ್ ಶೂಟರ್ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಅಲ್ಲದೇ ಮುಂಭಾಗದಲ್ಲಿ 4K ಮತ್ತು EIS ಸೌಲಭ್ಯ ಇರುವ 32MP ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 90W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಜೊತೆಗೆ 5,500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಸಹ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :