ವೇಗದ ಪ್ರೊಸೆಸರ್ ಇರುವ Vivo T4 Ultra ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಫ್ಲಿಪ್‌ಕಾರ್ಟ್‌ನಲ್ಲಿ ವಿವೋ T4 ಅಲ್ಟ್ರಾ ದರದಲ್ಲಿ ಭರ್ಜರಿ ಇಳಿಕೆ
ವಿವೋ T4 ಅಲ್ಟ್ರಾ ಫೋನ್ 5,500mAh ಬ್ಯಾಟರಿ ಪವರ್ ಹೊಂದಿದೆ
ವಿವೋ T4 ಅಲ್ಟ್ರಾ ಮೊಬೈಲ್ ಎರಡು ಆಕರ್ಷಕ ಕಲರ್ ಆಯ್ಕೆಗಳನ್ನು ಹೊಂದಿದೆ
ಮೊಬೈಲ್ ಮಾರುಕಟ್ಟೆಯಲ್ಲಿ Vivo T4 Ultra ಸ್ಮಾರ್ಟ್‌ಫೋನ್ ಈಗಾಗಲೇ ಸದ್ದು ಮಾಡಿದೆ. ಈ ಫೋನ್ ಸ್ಟೈಲಿಶ್ ಲುಕ್ ಜೊತೆಗೆ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು ಇದೀಗ Vivo T4 Ultra ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಘೋಷಿಸಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ವಿವೋ ಸಂಸ್ಥೆಯ ಈ ಮೊಬೈಲ್ MediaTek Dimensity 9300+ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 5,500mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ T4 ಅಲ್ಟ್ರಾ ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಭಾರತದಲ್ಲಿ Oppo F33 Pro 5G ಬಿಡುಗಡೆಗೆ ಡೇಟ್ ಕನ್ಫರ್ಮ್! ನಿರೀಕ್ಷಿತ ಫೀಚರ್ಸ್ ನೋಡಿ
Vivo T4 Ultra ಬೆಲೆಯಲ್ಲಿ ಭಾರೀ ಡಿಸ್ಕೌಂಟ್
ವಿವೋ ಕಂಪನಿಯ ವಿವೋ T4 ಅಲ್ಟ್ರಾ ಫೋನ್ ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB RAM + 256GB ವೇರಿಯಂಟ್ ಬೆಲೆ 40,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್ 35,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಇನ್ನು ಈ ಮೊಬೈಲ್ ಎರಡು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಫೋನಿಕ್ಸ್ ಗೋಲ್ಡ್ ಮತ್ತು ಗ್ರೇ ಕಲರ್ ಆಗಿವೆ.

ವಿವೋ T4 ಅಲ್ಟ್ರಾ ಮೊಬೈಲ್ ಫೀಚರ್ಸ್
ವಿವೋ T4 ಅಲ್ಟ್ರಾ ಮೊಬೈಲ್ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.67 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಮೊಬೈಲ್ MediaTek Dimensity 9300+ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಅನುಗುಣವಾಗಿ Android 15 based Funtouch OS 15 ಸಪೋರ್ಟ್ ಸಹ ಪಡೆದಿದೆ. ಹಾಗೆಯೇ ಇದು 12GB ವರೆಗೆ RAM ಮತ್ತು 512GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ.
ಅದೇ ರೀತಿ ವಿವೋ T4 ಅಲ್ಟ್ರಾ ಮೊಬೈಲ್ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP OIS ಮುಖ್ಯ ಕ್ಯಾಮೆರಾ ಸೆನ್ಸಾರ್ ಒಳಗೊಂಡಿರುವ ಜೊತೆಗೆ 50MP ಸೋನಿ IMX 882 ಪೆರಿಸ್ಕೋಪ್ ಮತ್ತು 8MP ಅಲ್ಟ್ರಾವೈಡ್ ಶೂಟರ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಮುಂಭಾಗದಲ್ಲಿ 4K ಮತ್ತು EIS ಸೌಲಭ್ಯ ಇರುವ 32MP ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 90W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 5500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಸಹ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile