7300mAh ಬ್ಯಾಟರಿ ಇರುವ Vivo T4R 5G ಮೊಬೈಲ್‌ ಈಗ ಆಫರ್‌ನಲ್ಲಿ ಲಭ್ಯ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ವಿವೋ T4R 5G ಮೊಬೈಲ್‌ ಆಫರ್‌ ಲಭ್ಯ

ವಿವೋ T4R 5G ಮೊಬೈಲ್‌ 50MP ಪ್ರಾಥಮಿಕ ಕ್ಯಾಮೆರಾ ರಚನೆ ಒಳಗೊಂಡಿದೆ

ವಿವೋ T4R 5G ಫೋನ್ MediaTek Dimensity 7400 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿದೆ

ಜನಪ್ರಿಯ ಇ ಕಾಮರ್ಸ್‌ ತಾಣವಾಗಿ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್‌ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಆಫರ್‌ ಲಭ್ಯ ಮಾಡುತ್ತದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ ಸಂಸ್ಥೆಯ Vivo T4R 5G ಮೊಬೈಲ್‌ ಭರ್ಜರಿ ಬೆಲೆ ಇಳಿಕೆ ದರದಲ್ಲಿ ಲಭ್ಯವಿದೆ. ಅಲ್ಲದೇ ಆಯ್ದ ಬ್ಯಾಂಕ್‌ ಕೊಡುಗೆಗಳ ಮೂಲಕ ಗ್ರಾಹಕರು ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್‌ MediaTek Dimensity 7400 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದ್ದು, ಹಾಗೆಯೇ 50MP ಸೌಲಭ್ಯದ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಮರಾಲ್ಡ್ ಬ್ಲಾಜ್ ಮತ್ತು ಫ್ಯಾಂಟೋಮ್ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಇನ್ನುಳಿದಂತೆ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ವಿವೋ T4R 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ನಾಳೆ ಹೊಸ ಲುಕ್‌ನಲ್ಲಿ ಎಂಟ್ರಿ ಕೊಡಲಿದೆ iQOO Neo 10 ಸ್ಮಾರ್ಟ್‌ಫೋನ್‌! ಇಲ್ಲಿದೆ ಮಾಹಿತಿ

Vivo T4R 5G ಮೊಬೈಲ್‌ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್‌

ಜನಪ್ರಿಯ ವಿವೋ T4R 5G ಮೊಬೈಲ್‌ ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಡಿಸ್ಕೌಂಟ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 8GB RAM + 128 GB ವೇರಿಯಂಟ್‌ 25,999 ರೂ.ಗಳ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 24,999 ರೂ.ಗಳ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಈ ಫೋನ್‌ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ ಎಮರಾಲ್ಡ್ ಬ್ಲಾಜ್ ಮತ್ತು ಫ್ಯಾಂಟೋಮ್ ಗ್ರೇ ಕಲರ್‌ ಆಯ್ಕೆಯನ್ನು ಪಡೆದುಕೊಂಡಿದೆ.

ವಿವೋ T4R 5G ಮೊಬೈಲ್‌ನ ಪ್ರಮುಖ ಫೀಚರ್ಸ್‌

ವಿವೋ T4R 5G ಮೊಬೈಲ್‌ ಮುಖ್ಯ ಡಿಸ್‌ಪ್ಲೇಯು 6.77 ಇಂಚಿನಪೂರ್ಣ ಹೆಚ್‌ಡಿ AMOLED ಮಾದರಿಯಲ್ಲಿ ಇದ್ದು, HDR10+ ಸಪೋರ್ಟ್‌ ಜೊತೆಗೆ 120Hz ರಿಫ್ರೆಶ್‌ ರೇಟ್‌ ಹೊಂದಿದೆ. ಇನ್ನು ಇದರ ಡಿಸ್‌ಪ್ಲೇ 1800 nits ಗರಿಷ್ಠ ಬ್ರೈಟ್ನೆಸ್‌ ಒದಗಿಸುವ ಸೌಲಭ್ಯ ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್‌ MediaTek Dimensity 7400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್‌ 12GB RAM + 256GB ವೇರಿಯಂಟ್‌ ಸೌಲಭ್ಯವನ್ನು ಒಳಗೊಂಡಿದೆ. 5,700mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

ಅಲ್ಲದೇ ವಿವೋ T4R 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದ್ದು, ದ್ವಿತೀಯ ಕ್ಯಾಮೆರಾವು 2MP ಅಲ್ಟ್ರಾ ವೈಡ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್‌ 32MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ 5,700mAh ಬ್ಯಾಟರಿ ಜೊತೆಗೆ 45W ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಪಡೆದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :