ಇ ಕಾಮರ್ಸ್ ತಾಣಗಳು ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಡಿಸ್ಕೌಂಟ್ ನೀಡುತ್ತಾ ಗ್ರಾಹಕರನ್ನು ಸೆಳೆಯುತ್ತವೆ. ಇತ್ತೀಚಿಗೆ ಬಿಡುಗಡೆ ಆಗಿರುವ Vivo T4R 5G ಮೊಬೈಲ್ ಅನ್ನು ಇದೀಗ ಆಫರ್ ಬೆಲೆಯಲ್ಲಿ ಖರೀದಿಸಲು ಅವಕಾಶ ಇದೆ. ಹೌದು ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಸದ್ಯ Vivo T4R 5G ಫೋನ್ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಆಯ್ದ ಬ್ಯಾಂಕ್ ಕೊಡುಗೆಗಳ ಮೂಲಕ ಗ್ರಾಹಕರು ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ MediaTek Dimensity 7400 ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದ್ದು, ಹಾಗೆಯೇ 50MP ಸೌಲಭ್ಯದ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನುಳಿದಂತೆ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ Vivo T4R 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Motorola Edge 60 Stylus ಬೆಲೆಯಲ್ಲಿ ದಿಢೀರ್ ಕುಸಿತ! ಬಜೆಟ್ ಬೆಲೆಯಲ್ಲಿ ಖರೀದಿಸಲು ಒಳ್ಳೆಯ ಚಾನ್ಸ್
ವಿವೋ ಸಂಸ್ಥೆಯ ಇತ್ತೀಚಿನ Vivo T4R 5G ಮೊಬೈಲ್ ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ಬೆಲೆ ಇಳಿಕೆ ಪಡೆದಿದೆ. ಈ ಮೊಬೈಲ್ 8 GB RAM + 128 GB ವೇರಿಯಂಟ್ 23,499 ರೂಗಳ ಬೆಲೆಯನ್ನು ಹೊಂದಿದ್ದು, ಆದರೆ ಪ್ರಸ್ತುತ ಅಮೆಜಾನ್‌ನಲ್ಲಿ 20,999 ರೂಗಳ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಈ ಮೊಬೈಲ್ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಹೆಚ್ಚುವರಿ ಡಿಸ್ಕೌಂಟ್ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು.
Vivo T4R 5G ಮೊಬೈಲ್ ಮುಖ್ಯ ಡಿಸ್‌ಪ್ಲೇಯು 6.77 ಇಂಚಿನಪೂರ್ಣ ಹೆಚ್‌ಡಿ AMOLED ಮಾದರಿಯಲ್ಲಿ ಇದ್ದು, HDR10+ ಸಪೋರ್ಟ್ ಜೊತೆಗೆ 120Hz ರಿಫ್ರೆಶ್ ರೇಟ್ ಹೊಂದಿದೆ. ಇನ್ನು ಇದರ ಡಿಸ್‌ಪ್ಲೇ 1800 nits ಗರಿಷ್ಠ ಬ್ರೈಟ್ನೆಸ್ ಒದಗಿಸುವ ಸೌಲಭ್ಯ ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್ MediaTek Dimensity 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್ 12GB RAM + 256GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. 5,700mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ.
ಅಲ್ಲದೇ Vivo T4R 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು, ದ್ವಿತೀಯ ಕ್ಯಾಮೆರಾವು 2MP ಅಲ್ಟ್ರಾ ವೈಡ್ ಸೆನ್ಸಾರ್ ಹೊಂದಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್ 32MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 5,700mAh ಬ್ಯಾಟರಿ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ.