ಸ್ಟೈಲಿಶ್‌ ಲುಕ್‌ ಇರುವ Vivo T4x 5G ಖರೀದಿಗೆ ಇದುವೇ ಬೆಸ್ಟ್‌ ಟೈಮ್‌! ಭರ್ಜರಿ ಡಿಸ್ಕೌಂಟ್‌ ಲಭ್ಯ

HIGHLIGHTS

ಫ್ಲಿಪ್‌ಕಾರ್ಟ್‌ ತಾಣದಲ್ಲಿ Vivo T4x 5G ಫೋನ್‌ಗೆ ಬಿಗ್ ಡಿಸ್ಕೌಂಟ್‌

ವಿವೋದ ಈ ಸ್ಮಾರ್ಟ್‌ಫೋನ್‌ MediaTek Dimensity 7300 ಪ್ರೊಸೆಸರ್‌ ಅನ್ನು ಪಡೆದಿದೆ

Vivo T4x 5G ಮೊಬೈಲ್‌ 6,500mAh ಸಾಮರ್ಥ್ಯದ ಬ್ಯಾಟರಿ ಪವರ್‌ ಪಡೆದುಕೊಂಡಿದೆ

ಸ್ಟೈಲಿಶ್‌ ಲುಕ್‌ ಇರುವ Vivo T4x 5G ಖರೀದಿಗೆ ಇದುವೇ ಬೆಸ್ಟ್‌ ಟೈಮ್‌! ಭರ್ಜರಿ ಡಿಸ್ಕೌಂಟ್‌ ಲಭ್ಯ

ಬಜೆಟ್‌ ದರದಲ್ಲಿ ಹೊಸ ವಿವೋ ಸ್ಮಾರ್ಟ್‌ಫೋನ್‌ ಖರೀದಿ ಮಾಡಲು ಇದುವೇ ಬೆಸ್ಟ್‌ ಟೈಮ್‌. ಹೌದು, ವಿವೋ ಸಂಸ್ಥೆಯ Vivo T4x 5G ಮೊಬೈಲ್‌ ಈಗ Flipkart ವೆಬ್‌ಸೈಟ್‌ ನಲ್ಲಿ ಭರ್ಜರಿ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ. ವಿವೋ ಕಂಪನಿಯ ಈ ಮೊಬೈಲ್‌ MediaTek Dimensity 7300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು ಇದರೊಂದಿಗೆ 6,500mAh ಬ್ಯಾಟರಿ ಸಪೋರ್ಟ್‌ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ ಮೂರು ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ Flipkart ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T4x 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಆಫರ್‌ನಲ್ಲಿ POCO M7 Plus ಮೊಬೈಲ್‌ ಖರೀದಿಸಲು ಇದಕ್ಕಿಂತ ಒಳ್ಳೆಯ ಸಮಯ ಬೇಕೆ?

Vivo T4x 5G ಮೊಬೈಲ್‌ಗೆ ಭರ್ಜರಿ ಡಿಸ್ಕೌಂಟ್‌

ಜನಪ್ರಿಯ ವಿವೋ ಕಂಪನಿಯ ವಿವೋ T4x 5G ಮೊಬೈಲ್‌ ಸದ್ಯ Flipkart ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್‌ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 6GB RAM + 128GB ವೇರಿಯಂಟ್‌ ಬೆಲೆ 17,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 15,499 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು Flipkart Axis ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿಯಾಗಿ 775 ರೂಗಳ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಆಕ್ವಾ ಮರೀನ್ ಬ್ಲೂ, ಗ್ಲಾಸಿಯಲ್‌ ಟೆಲ್‌ ಮತ್ತು ಪ್ರೊಂಟೋ ಪರ್ಪಲ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Vivo T4x

Vivo T4x 5G ಮೊಬೈಲ್‌ನ ಪ್ರಮುಖ ಫೀಚರ್ಸ್‌ ಹೀಗಿವೆ

ವಿವೋ T4x 5G ಮೊಬೈಲ್‌ ಡಿಸ್‌ಪ್ಲೇಯು 6.72 ಇಂಚಿನ ಪೂರ್ಣ LCD ಪ್ಯಾನೆಲ್ ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 1050 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ MediaTek Dimensity 7300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು ಆಂಡ್ರಾಯ್ಡ್‌ 15 ಓಎಸ್‌ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ವಿವೋದ ಈ ಮೊಬೈಲ್‌ 6GB + 128GB, 8GB + 128GB ಹಾಗೂ 8GB + 256GB ವೇರಿಯಂಟ್‌ ಸೌಲಭ್ಯವನ್ನು ಒಳಗೊಂಡಿದೆ.

ಹಾಗೆಯೇ ವಿವೋ T4x 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 8MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್‌ 6,500 mAh  ಬ್ಯಾಟರಿ ಜೊತೆಗೆ 44W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo