ಬಜೆಟ್ ದರದಲ್ಲಿ ಹೊಸ ವಿವೋ ಸ್ಮಾರ್ಟ್‌ಫೋನ್ ಖರೀದಿ ಮಾಡಲು ಇದುವೇ ಬೆಸ್ಟ್ ಟೈಮ್. ಹೌದು, ವಿವೋ ಸಂಸ್ಥೆಯ Vivo T4x 5G ಮೊಬೈಲ್ ಈಗ Flipkart ವೆಬ್‌ಸೈಟ್ ನಲ್ಲಿ ಭರ್ಜರಿ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ. ವಿವೋ ಕಂಪನಿಯ ಈ ಮೊಬೈಲ್ MediaTek Dimensity 7300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು ಇದರೊಂದಿಗೆ 6,500mAh ಬ್ಯಾಟರಿ ಸಪೋರ್ಟ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಮೂರು ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ Flipkart ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿವೋ T4x 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಆಫರ್‌ನಲ್ಲಿ POCO M7 Plus ಮೊಬೈಲ್ ಖರೀದಿಸಲು ಇದಕ್ಕಿಂತ ಒಳ್ಳೆಯ ಸಮಯ ಬೇಕೆ?
ಜನಪ್ರಿಯ ವಿವೋ ಕಂಪನಿಯ ವಿವೋ T4x 5G ಮೊಬೈಲ್ ಸದ್ಯ Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 6GB RAM + 128GB ವೇರಿಯಂಟ್ ಬೆಲೆ 17,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್ 15,499 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು Flipkart Axis ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿಯಾಗಿ 775 ರೂಗಳ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಆಕ್ವಾ ಮರೀನ್ ಬ್ಲೂ, ಗ್ಲಾಸಿಯಲ್ ಟೆಲ್ ಮತ್ತು ಪ್ರೊಂಟೋ ಪರ್ಪಲ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
ವಿವೋ T4x 5G ಮೊಬೈಲ್ ಡಿಸ್‌ಪ್ಲೇಯು 6.72 ಇಂಚಿನ ಪೂರ್ಣ LCD ಪ್ಯಾನೆಲ್ ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1050 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ MediaTek Dimensity 7300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು ಆಂಡ್ರಾಯ್ಡ್ 15 ಓಎಸ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ವಿವೋದ ಈ ಮೊಬೈಲ್ 6GB + 128GB, 8GB + 128GB ಹಾಗೂ 8GB + 256GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ.
ಹಾಗೆಯೇ ವಿವೋ T4x 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 8MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 6,500 mAh ಬ್ಯಾಟರಿ ಜೊತೆಗೆ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.