ನಾಳೆಯಿಂದ ಹೊಸ Vivo T5 ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ; ಬೆಲೆ ಹಾಗೂ ಫೀಚರ್ಸ್‌ ನೋಡಿ

HIGHLIGHTS

ನಾಳೆ (ಸೆಪ್ಟೆಂಬರ್ 9 ರಿಂದ) ವಿವೋ T5 5G ಮೊಬೈಲ್‌ ಸೇಲ್‌

ವಿವೋ T5 5G ಮೊಬೈಲ್‌ 7,050mAh ಬ್ಯಾಟರಿ ಸೌಲಭ್ಯ ಪಡೆದಿದೆ

ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೋ ಪ್ರೊಸೆಸರ್‌ ಹೊಂದಿದೆ

ನಾಳೆಯಿಂದ ಹೊಸ Vivo T5 ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ; ಬೆಲೆ ಹಾಗೂ ಫೀಚರ್ಸ್‌ ನೋಡಿ

ವಿವೋ ಕಂಪನಿಯ ಹೊಸ Vivo T5 ಸ್ಮಾರ್ಟ್‌ಫೋನ್‌ ಮೀಡ್‌ರೇಂಜ್‌ ಬೆಲೆ ಹಾಗೂ ಫೀಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ನಾಳೆ (ಸೆಪ್ಟೆಂಬರ್ 9 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಸೇಲ್‌ ಪ್ರಾರಂಭ ಮಾಡಿದೆ. ಈ ನೂತನ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7500 Turbo ಚಿಪ್‌ಸೆಟ್‌ ಪ್ರೊಸೆಸರ್‌ ಜೊತೆಗೆ 7,050mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್‌ 50MP ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ರಾಯಲ್ ಬ್ರಾನ್ಜ್ ಮತ್ತು ಸಿಲ್ವರ್ ಗ್ರೀನ್ ಕಲರ್‌ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ವಿವೋ T5 5G ಮೊಬೈಲ್‌ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : OnePlus ಕಂಪನಿಯ ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಭಾರೀ ರಿಯಾಯಿತಿ!

Vivo T5 ಮೊಬೈಲ್‌ ಸೇಲ್‌

ಮೀಡ್‌ರೇಂಜ್ ಬೆಲೆಯಲ್ಲಿ ನೂತನವಾಗಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ವಿವೋ T5 5G ಮೊಬೈಲ್‌ ನಾಳೆ (ಸೆಪ್ಟೆಂಬರ್ 9 ರಿಂದ) ಮಧ್ಯಾಹ್ನ 12 ಗಂಟೆಗೆ ದೇಶೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಲಿದೆ. ಈ ಮೊಬೈಲ್‌ನ 6GB + 128GB ಸ್ಟೋರೇಜ್‌ ವೇರಿಯಂಟ್‌ 34,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು 8GB + 128GB ಸ್ಟೋರೇಜ್ ವೇರಿಯಂಟ್‌ 39,999 ರೂ.ಗಳ ಬೆಲೆ ಪಡೆದುಕೊಂಡಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್‌ 44,999 ರೂ.ಗಳ ಬೆಲೆ ಪಡೆದುಕೊಂಡಿದೆ. ಅದೇ ರೀತಿ ಟಾಪ್‌ ಎಂಡ್‌ 12GB + 256GB ವೇರಿಯಂಟ್‌ ಬೆಲೆಯು 49,999 ರೂ.ಗಳು ಆಗಿದೆ. ಈ ಫೋನ್‌ ರಾಯಲ್ ಬ್ರಾನ್ಜ್ ಮತ್ತು ಸಿಲ್ವರ್ ಗ್ರೀನ್ ಕಲರ್‌ ಆಯ್ಕೆ ಪಡೆದುಕೊಂಡಿದೆ.

Vivo T5 back

ವಿವೋ T5 ಮೊಬೈಲ್‌ ಫೀಚರ್ಸ್‌

ವಿವೋ T5 ಮೊಬೈಲ್‌ 6.83 ಇಂಚಿನ 1.5K 3D ಕರ್ವ್ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 2,000 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ MediaTek Dimensity 7500 Turbo ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ ನಾಲ್ಕು ಭಿನ್ನ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 16 ಆಧಾರಿತ ಒರಿಜಿನ್ OS 6 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಹಾಗೆಯೇ ವಿವೋ T5 ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,050mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP68 + IP69 ರೇಟಿಂಗ್‌ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile