ಲಾಂಚ್‌ ಆಗಿದೆ ಬಹುನಿರೀಕ್ಷಿತ Vivo T5 Lite 5G ಮೊಬೈಲ್‌! 44W ಫಾಸ್ಟ್ ಚಾರ್ಜಿಂಗ್

HIGHLIGHTS

ವಿವೋ ಸಂಸ್ಥೆಯ ಈ ಫೋನ್‌ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ

ಈ ಹೊಸ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಪಡೆದಿದೆ

ವಿವೋ ಕಂಪನಿಯ ಈ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ

ಲೀಡಿಂಗ್ ಮೊಬೈಲ್‌ ಕಂಪನಿಗಳ ಸಾಲಿನಲ್ಲಿ ಇರುವ ವಿವೋ ಸಂಸ್ಥೆಯು ಹೊಸದಾಗಿ Vivo T5 Lite 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಜುಲೈ 16 ರಂದು) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಬಜೆಟ್‌ ವಿಭಾಗದಲ್ಲಿ ಲಗ್ಗೆ ಇಟ್ಟಿರುವ ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಸರಣಿಯ ಚಿಪ್‌ಸೆಟ್ ಪ್ರೊಸೆಸರ್‌ ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಹಾಗೆಯೇ ಇದು 50MP ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಫೋನ್‌ ಟ್ವಿಲೈಟ್ ಶ್ಯಾಡೋ ಮತ್ತು ವೇವ್ ಬ್ಲೂ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ವಿವೋ T5 ಲೈಟ್‌ 5G ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಅಗ್ಗದ ಬೆಲೆಯಲ್ಲಿ Realme C100x ಸ್ಮಾರ್ಟ್‌ಫೋನ್‌ ಬಿಡುಗಡೆ! 8,000mAh ಬ್ಯಾಟರಿ ಸಪೋರ್ಟ್

Vivo T5 Lite 5G ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ವಿವೋ ಕಂಪನಿಯ ವಿವೋ T5 ಲೈಟ್‌ 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ಮೊಬೈಲ್‌ನ 4GB + 128GB ಸ್ಟೋರೇಜ್‌ ವೇರಿಯಂಟ್‌ 19,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 6GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 21,999 ರೂ.ಗಳು ಆಗಿದೆ. ಇನ್ನು 6GB + 256GB ಸ್ಟೋರೇಜ್‌ ವೇರಿಯಂಟ್‌ ದರವು 24,999 ರೂ.ಗಳು ಆಗಿದೆ. ಈ ಫೋನ್‌ ಟ್ವಿಲೈಟ್ ಶ್ಯಾಡೋ ಮತ್ತು ವೇವ್ ಬ್ಲೂ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಇನ್ನು ಈ ಫೋನ್‌ ಇದೇ ಜುಲೈ 22 ರಿಂದ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಹಾಗೂ ವಿವೋ ವೆಬ್‌ಸೈಟ್‌ ಮೂಲಕ ಖರೀದಿಗೆ ಲಭ್ಯವಿದೆ.

ವಿವೋ T5 ಲೈಟ್‌ 5G ಮೊಬೈಲ್‌ ಫೀಚರ್ಸ್‌

ವಿವೋ T5 ಲೈಟ್‌ 5G ಮೊಬೈಲ್‌ 6.74 ಇಂಚಿನ HD+ LCD ಪ್ಯಾನೆಲ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಸರಣಿಯ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB + 128GB, 6GB + 128GB ಹಾಗೂ 6GB + 256GB ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್‌ 16 ಆಧಾರಿತ OriginOS 6 ಓಎಸ್ ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ವಿವೋ T5 ಲೈಟ್‌ 5G ಮೊಬೈಲ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ಒದಗಿಸಲಾಗಿದೆ. ಅಲ್ಲದೇ ಇದು 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :