Vivo T5 Lite ಮೊಬೈಲ್ ಲಾಂಚ್‌ಗೆ ಮುಹೂರ್ತ ಫಿಕ್ಸ್! 6,500mAh ಬ್ಯಾಟರಿ ಬ್ಯಾಕ್‌ಅಪ್ ಖಚಿತ
ಜುಲೈ 16 ರಂದು ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ವಿವೋ T5 ಲೈಟ್ ಫೋನ್
ವಿವೋ T5 ಲೈಟ್ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ
ವಿವೋ T5 ಲೈಟ್ ಫೋನ್ 6,500mAh ಬ್ಯಾಟರಿ ಬ್ಯಾಕ್‌ಅಪ್‌ನಲ್ಲಿ ಲಗ್ಗೆ ಇಡಲಿದೆ
ಜನಪ್ರಿಯ ವಿವೋ ಮೊಬೈಲ್ ಸಂಸ್ಥೆಯು ದೇಶೀಯ ಮಾರುಕಟ್ಟೆಗೆ ಹೊಸದಾಗಿ Vivo T5 Lite ಸ್ಮಾರ್ಟ್‌ಫೋನ್ ಅನ್ನು ಇದೇ ಜುಲೈ 16 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಫೋನ್ ಲಾಂಚ್ ಕುರಿತು ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ಎಂಟ್ರಿ ಕೊಡಲಿರುವ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಅಥವಾ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಇನ್ನು ಈ ಫೋನ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಬಹುತೇಕ ಪಕ್ಕಾ ಆಗಿದೆ. ಹಾಗಾದರೆ ವಿವೋ T5 ಲೈಟ್ ಮೊಬೈಲ್‌ನ ಲಾಂಚ್ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Motorola Edge 70 Max ಮೊಬೈಲ್ ಲಾಂಚ್‌ಗೆ ಡೇಟ್ ಫಿಕ್ಸ್! ಪ್ರೀಮಿಯಂ ಲುಕ್‌ನಲ್ಲಿ ಬರಲಿದೆ
Vivo T5 Lite ಬಿಡುಗಡೆಗೆ ದಿನಾಂಕ ಫಿಕ್ಸ್
ವಿವೋ ಮೊಬೈಲ್ ಕಂಪನಿಯ ಹೊಸ ವಿವೋ T5 ಲೈಟ್ ಮೊಬೈಲ್ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ವಿವೋದ ಈ ಫೋನ್ ಇದೇ ಜುಲೈ 16 ರಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಆಗುವುದು ಖಚಿತವಾಗಿದೆ. ಲಾಂಚ್ ಕುರಿತು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಲೀಕ್ ಮಾಹಿತಿ ಪ್ರಕಾರ ಈ ಮೊಬೈಲ್ 4GB + 128GB, 6GB + 128GB ಮತ್ತು 6GB + 256GB ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆ ಬರಲಿದೆ ಎನ್ನಲಾಗಿದೆ. ಹಾಗೆಯೇ ಟ್ವಿಲೈಟ್ ಶ್ಯಾಡೋ ಮತ್ತು ವೇವ್ ಬ್ಲೂ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ.

ವಿವೋ T5 ಲೈಟ್ ನಿರೀಕ್ಷಿತ ಫೀಚರ್ಸ್ ಮಾಹಿತಿ
ಮುಂಬರುವ ಈ ಫೋನ್ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಜೊತೆಗೆ 1,200 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಅಥವಾ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ 4GB + 128GB, 6GB + 128GB ಮತ್ತು 6GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.
ವಿವೋ T5 ಲೈಟ್ ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಒಳಗೊಂಡಿರುವ ಸೂಚನೆಗಳು ಇವೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ನಲ್ಲಿ ಇರಬಹುದು ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಬಲ ಪಡೆದಿರಲಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಬಹುದು ಎನ್ನಲಾಗಿದೆ. ಹಾಗೆಯೇ ಧೂಳು ಮತ್ತು ನೀರು-ನಿರೋಧಕ್ಕಾಗಿ ಇದು IP65 ರೇಟಿಂಗ್ ಸೌಲಭ್ಯ ಹೊಂದಿರಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
