ಡಿಸ್ಕೌಂಟ್‌ ಬೆಲೆಯಲ್ಲಿ Vivo T5 Lite ಮೊಬೈಲ್‌ ಖರೀದಿಸಲು ಈ ಆಫರ್‌ ಬೊಂಬಾಟ್‌!

HIGHLIGHTS

ವಿವೋ T5 ಲೈಟ್‌ ಫೋನಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಸಖತ್ ಆಫರ್‌

ವಿವೋ T5 ಲೈಟ್‌ ಮೊಬೈಲ್‌ 6,500mAh ಬ್ಯಾಟರಿ ಸೌಲಭ್ಯ ಹೊಂದಿದೆ

ವಿವೋ T5 ಲೈಟ್‌ ಸ್ಮಾರ್ಟ್‌ಫೋನ್‌ ಎರಡು ಆಕರ್ಷಕ ಕಲರ್‌ನಲ್ಲಿ ಲಭ್ಯ

Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ವಿವೋ ಕಂಪನಿಯ Vivo T5 Lite ಮೊಬೈಲ್‌ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,500mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ವಿವೋ T5 ಲೈಟ್‌ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಕಡಿಮೆ ದರದ Lava Bold N4 Pro 5G ಮೊಬೈಲ್‌ ಈಗ ಮತ್ತಷ್ಟು ರಿಯಾಯಿತಿಯಲ್ಲಿ ಲಭ್ಯ!

Vivo T5 Lite ಈಗ ಡಿಸ್ಕೌಂಟ್‌ನಲ್ಲಿ ಲಭ್ಯ

ಕಡಿಮೆ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ T5 ಲೈಟ್‌ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 33,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 20,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಟ್ವಿಲೈಟ್ ಶ್ಯಾಡೋ ಮತ್ತು ವೇವ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

Vivo T5 Lite 5G

ವಿವೋ T5 ಲೈಟ್‌ 5G ಮೊಬೈಲ್‌ ಫೀಚರ್ಸ್‌

ವಿವೋ T5 ಲೈಟ್‌ 5G ಮೊಬೈಲ್‌ 6.74 ಇಂಚಿನ HD+ LCD ಪ್ಯಾನೆಲ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಸರಣಿಯ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB + 128GB, 6GB + 128GB ಹಾಗೂ 6GB + 256GB ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್‌ 16 ಆಧಾರಿತ OriginOS 6 ಓಎಸ್ ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ವಿವೋ T5 ಲೈಟ್‌ 5G ಮೊಬೈಲ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ಒದಗಿಸಲಾಗಿದೆ. ಅಲ್ಲದೇ ಇದು 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 44W ವೈರ್ಡ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :