ನಾಳೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ Vivo T5 Lite ಮೊಬೈಲ್‌! ಕುತೂಹಲ ಮೂಡಿಸಿದ ಲೀಕ್ ಫೀಚರ್ಸ್‌

HIGHLIGHTS

ನಾಳೆ (ಜುಲೈ 16 ರಂದು) ವಿವೋ T5 ಲೈಟ್ ಮೊಬೈಲ್‌ ಬಿಡುಗಡೆ

ವಿವೋ ಕಂಪನಿಯ ಈ ಫೋನ್‌ 7,100mAh ಬ್ಯಾಟರಿ ಸಪೋರ್ಟ್ ಹೊಂದಿರಲಿದೆ

ವಿವೋ T5 ಲೈಟ್ ಮೊಬೈಲ್‌ ನಾಲ್ಕು ಆಕರ್ಷಕ ಕಲರ್‌ ಆಯ್ಕೆ ಒಳಗೊಂಡಿರಲಿದೆ

ಮೊಬೈಲ್‌ ಪ್ರಿಯರ ನೆಚ್ಚಿನ ಬ್ರಾಂಡ್‌ಗಳಲ್ಲಿ ಒಂದಾದ ವಿವೋ ಇದೀಗ Vivo T5 Lite ಮೊಬೈಲ್‌ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಕಂಪನಿಯ ಈ ಸ್ಮಾರ್ಟ್‌ಫೋನ್‌ ನಾಳೆ (ಜುಲೈ 16 ರಂದು) ಅಧಿಕೃತವಾಗಿ ಭಾರತದಲ್ಲಿ ಲಾಂಚ್ ಆಗಲಿದೆ. ಮುಂಬರುವ ಈ ಮೊಬೈಲ್‌ನ ಲಾಂಚ್‌ ಕುರಿತು ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಈ ಫೋನಿನ ಕುರಿತ ಮೈಕ್ರೋಸೈಟ್ ತೆರೆಯಲಾಗಿದೆ. ಈ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರುವುದು ಬಹುತೇಕ ಪಕ್ಕಾ ಆಗಿದೆ. ಅಲ್ಲದೇ 50 ಮೆಗಾಪಿಕ್ಸಲ್‌ ಕ್ಯಾಮೆರಾ ಒಳಗೊಂಡಿರುವ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಸೌಲಭ್ಯ ಪಡೆದಿರಲಿದೆ ಎನ್ನಲಾಗಿದೆ. ಹಾಗಾದರೆ ಮುಂಬರುವ ವಿವೋ T5 ಲೈಟ್ ಮೊಬೈಲ್‌ನ ಲಾಂಚ್‌ ದಿನಾಂಕ ಹಾಗೂ ನಿರೀಕ್ಷಿತ ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Instamart-HPCL ಹೊಸ ಪಾಲುದಾರಿಕೆ: LPG ಸಿಲಿಂಡರ್ ಈಗ ಕೆಲವೇ ನಿಮಿಷಗಳಲ್ಲಿ ನಿಮ್ಮ ಮನೆಗೆ ಬರುತ್ತೆ!

ನಾಳೆ Vivo T5 Lite ಮೊಬೈಲ್‌ ಲಾಂಚ್

ವಿವೋ ಸಂಸ್ಥೆಯ ಹೊಸ ವಿವೋ T5 ಲೈಟ್ ಲಾಂಚ್ ಮಾಡಲು ಸಕಲ ಸಜ್ಜಾಗಿದೆ. ಅಂದಹಾಗೆ ಈ ನೂತನ ಸ್ಮಾರ್ಟ್‌ಫೋನ್‌ ಅನ್ನು ನಾಳೆ (ಜುಲೈ 16 ರಂದು) ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಈ ಮೊಬೈಲ್‌ ಕುರಿತ ಮೈಕ್ರೋಸೈಟ್ ತೆರೆಯಲಾಗಿದೆ. ಲಾಂಚ್ ಬಳಿಕ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ ಮೂಲಕ ಸೇಲ್‌ ಪ್ರಾರಂಭಿಸಲಿದೆ. ಅಂದಹಾಗೆ ಲೀಕ್ ಮಾಹಿತಿ ಪ್ರಕಾರ ಈ ಮೊಬೈಲ್‌ 4GB + 128GB, 6GB + 128GB ಮತ್ತು 6GB + 256GB ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆ ಬರಲಿದೆ ಎನ್ನಲಾಗಿದೆ. ಹಾಗೆಯೇ ಟ್ವಿಲೈಟ್ ಶ್ಯಾಡೋ ಮತ್ತು ವೇವ್ ಬ್ಲೂ ಬಣ್ಣದ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ.

ವಿವೋ T5 ಲೈಟ್ ನಿರೀಕ್ಷಿತ ಫೀಚರ್ಸ್‌ ಮಾಹಿತಿ

ಮುಂಬರುವ ಈ ಫೋನ್‌ 6.74 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಯಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ವರೆಗಿನ ಹೈ ಬ್ರೈಟ್‌ನೆಸ್ ಸೌಲಭ್ಯ ಪಡೆದಿರಬಹುದು. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಅಥವಾ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಗಳಿವೆ. ಇದಕ್ಕೆ ಪೂರಕವಾಗಿ 4GB + 128GB, 6GB + 128GB ಮತ್ತು 6GB + 256GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.

ವಿವೋ T5 ಲೈಟ್ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಒಳಗೊಂಡಿರುವ ಸೂಚನೆಗಳು ಇವೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ನಲ್ಲಿ ಇರಬಹುದು ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಬಲ ಪಡೆದಿರಲಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಒದಗಿಸಬಹುದು ಎನ್ನಲಾಗಿದೆ. ಹಾಗೆಯೇ ಧೂಳು ಮತ್ತು ನೀರು-ನಿರೋಧಕ್ಕಾಗಿ ಇದು IP65 ರೇಟಿಂಗ್ ಸೌಲಭ್ಯ ಹೊಂದಿರಲಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :